ನವದೆಹಲಿ: ಆಕ್ಸಿಜನ್ ಕೊರತೆಯಿಂದ ಚಾಮರಾಜ ನಗರದಲ್ಲಿ ೩೫ ಜನ ಮೃತಪಟ್ಟ ಪ್ರಕರಣದ ತನಿಖೆ ನಡೆಸುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ. ವಿಧಾನ ಮಂಡಲ ನಿವೃತ್ತ ಭದ್ರತಾ ಅಧಿಕ್ಷಕ M.N ಪಿಳ್ಳಪ್ಪ ದೂರು ದಾಖಲಿಸಿದ್ರು. ಚಾಮರಾಜ ನಗರ ಪ್ರಕರಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವು ಸ್ಪಷ್ಟವಾಗಿದೆ.
ವರ್ಗಾವಣೆ ಹೊರತುಪಡಿಸಿ ಇನ್ ಯಾವುದೇ ಕ್ರಮಗಳನ್ನು ಅಧಿಕಾರಿಗಳ ವಿರುದ್ಧವಾಗಿ ತೆಗೆದುಕೊಂಡಿಲ್ಲ. ಈ ಪ್ರಕರಣದಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ತಪ್ಪಿಸ್ಥರಾಗಿದ್ದು, ಇತರೆ ಅಧಿಕಾರಿಗಳೊಂದಿಗಿನ ಮನಸ್ಥಾಪದ ಕಾರಣ ಈ ಘಟನೆಯು ಸಂಭವಿಸಿದೆ.
ಈ ಹಿನ್ನೆಲೆಯಲ್ಲಿ ರೋಹಿಣಿ ಸಿಂಧೂರಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಎಂದು M.N ಪಿಳ್ಳಪ್ಪ ಒತ್ತಾಯಿಸಿದ್ರು. ರೋಹಿಣಿ ಸಿಂಧೂರಿ ವಿರುದ್ಧವಾಗಿ ಅಕ್ರಮವಾಗಿ ಈಜುಕೊಳ ನಿರ್ಮಾಣ, ತಿರುಪತಿಯಲ್ಲಿದ್ದ ಮೈಸೂರು ಮಹಾರಾಜರ ಭೂಮಿ ಆಂಧ್ರಪ್ರದೇಶ ಸರ್ಕಾರಕ್ಕೆ ಹಸ್ತಾಂತರ ಸೇರಿ ಕೆಲವು ಆರೋಪಗಳಿವೆ. ಅವೇಲ್ಲದರ ಬಗ್ಗೆ ತನಿಖೆಯಾಗಬೇಕು. ಜೊತೆಗೆ ಈ ಕೂಡಲೇ ರೋಹಿಣಿ ಸಿಂಧೂರಿರವರನ್ನು ಅಮಾನತು ಮಾಡಿ ತನಿಖೆ ಮಾಡಬೇಕು ಎಂದು M.N. ಪಿಳ್ಳಪ್ಪ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.