ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಕರ್ಲೆ ಗ್ರಾಮದಲ್ಲಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ 15 ಲಕ್ಷ ರೂ ಅನುದಾನದಲ್ಲಿ ರಸ್ತೆಯ ಕಾಮಗಾರಿಗಳಿಗೆ ಸ್ಥಳೀಯ ಜನಪ್ರತಿನಿಧಿಗಳು ಚಾಲನೆ ನೀಡಿದರು. ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದಾಗಿ ರಸ್ತೆ ಕಾಮಗಾರಿಗೆ ಅನುದಾನ ಮಂಜೂರಾಗಿದೆ. ಬುಧವಾರ ಲಕ್ಷ್ಮಿ ಹೆಬ್ಬಾಳಕರ್ ಅನುಪಸ್ಥಿತಿಯಲ್ಲಿ ಗ್ರಾಮದ ಜನಪ್ರತಿನಿಧಿಗಳು ಕಾಮಗಾರಿಗೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮೃಣಾಲ ಹೆಬ್ಬಾಳಕರ್, ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಶಂಕರ ಗೋವೆಕರ್, ವಿನಾಯಕ ಪಾಟೀಲ, ಅಮೃತ್ ಕೇಮನಾಳ್ಕರ್, ಸಾಂಬ್ರೇಕರ್ ಉಪಸ್ಥಿತರಿದ್ದರು.