ಬೆಂಗಳೂರು: ವಿದ್ಯಾರ್ಥಿಗಳ ಹಾಜರಾತಿ ಇಲ್ಲದೆ ಈ ವರ್ಷ ಸ್ಕೂಲಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯು ಆದೇಶ ಹೋರಡಿಸಿದೆ. ಕೋವಿಡ್ ಎಲ್ಲಾ ನಿಯಮಾವಳಿಗಳನ್ನು ಅನುಸರಿಸುವುದರ ಜೊತೆಗೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುವ ವೀಡಿಯೋವನ್ನು ಆನ್ ಲೈನ್ ಕ್ಲಾಸ್ ಗ್ರೂಪ್ ನಲ್ಲಿ ಮಕ್ಕಳಿಗೆ ಶೇರ್ ಮಾಡಬೇಕು.
ದೈಹಿಕ ತರಗತಿಗಳಿಗೆ ಹಾಜರಾಗಲು ಅನುಮತಿಸದ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಮತಿಯಿಲ್ಲ. ಮತ್ತೊಂದೆಡೆ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಮುಖ್ಯಸ್ಥರು, ಸದಸ್ಯರು ಮತ್ತು ಮುಖ್ಯ ಶಿಕ್ಷಕರು, ಹಾಗೂ ಇತರ ನಾಗರಿಕರೊಂದಿಗೆ ಆಚರಣೆಯಲ್ಲಿ ಭಾಗವಹಿಸಬಹುದಾಗಿದೆ.
ಸ್ವಾತಂತ್ರ್ಯ ದಿನದ ಬಳಿಕ, ವಿದ್ಯಾರ್ಥಿಗಳು ದಿನದ ಮಹತ್ವ, ರಸಪ್ರಶ್ನೆ ಹಾಗೂ ರಾಷ್ಟ್ರೀಯತೆಯ ಬಗ್ಗೆ ನಡೆಯುವ ವಿವಿಧ ಸ್ಪರ್ಧೆಗಳಲ್ಲಿ ಆನ್ ಲೈನ್ ಚರ್ಚೆಯಲ್ಲಿ ಭಾಗವಹಿಸಬೇಕು. ಸ್ವಾತಂತ್ರ್ಯ ಹೋರಾಟಗಾರರ ಪ್ರಾಮುಖ್ಯತೆ ಹಾಗೂ ಸ್ವಾತಂತ್ರ್ಯ ಹೋರಾಟದ ಮಹತ್ವದ ಬಗ್ಗೆ ಅರಿಯಬೇಕಾಗಿದೆ ಎಂದು ಸುತ್ತೋಲೆಯನ್ನು ಹೊರಡಿಸಿದೆ. ದೊಡ್ಡ ದೊಡ್ಡ ಸಭೆ ನಡೆಸುವಂತಿಲ್ಲ, ಸಾರ್ವಜನಿಕರಿಗೆ ಅವಕಾಶವಿಲ್ಲ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂಬ ನಿಯಮಗಳನ್ನು ಜಾರಿ ಮಾಡು ಆದೇಶ ಹೊರಡಿಸಿದೆ.