ಕೂಗು ನಿಮ್ಮದು ಧ್ವನಿ ನಮ್ಮದು

ಸದೃಢ ಸಮಾಜಕ್ಕೆ ಉದ್ಯಮಶೀಲತೆಯೇ ಮುಖ್ಯ: ಅಶ್ವಥ್ ನಾರಾಯಣ್

ಧಾರವಾಡ: ಉದ್ಯಮಶೀಲರು ಸೋಲಿನಿಂದ ಧೃತಿಗೆಡದೆ ಸಮರ್ಥ ಮಾರ್ಗದರ್ಶನ, ಸ್ಪಷ್ಟ ಗುರಿಯೊಂದಿಗೆ ಸತತವಾಗಿ ಪ್ರಯತ್ನ ಮಾಡಿದಾಗ ಮಾತ್ರ ಯಶಸ್ಸು ಸಾಧ್ಯ, ದೇಶದಲ್ಲಿ ಕರ್ನಾಟಕವೇ ಪ್ರಥಮ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿ ಕಲಿಕೆಯೊಂದಿಗೆ ಕೌಶಲ್ಯ ಬೆಳೆಸಲು ಸಂಕಲ್ಪ ಮಾಡಿದೆ ಎಂದು ಉನ್ನತ ಶಿಕ್ಷಣ ಸಚಿವ Dr.C.N ಅಶ್ವಥ್ ನಾರಾಯಣ್ ಹೇಳಿದ್ರು.

ಧಾರವಾಡದಲ್ಲಿ ವಿಶ್ವ ಉದ್ಯಮ ಶೀಲರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಸಿ.ಎನ್ .ಅಶ್ವಥ್ ನಾರಾಯಣ್ ಸರ್ಕಾರ ಇದೇ ಪ್ರಥಮ ಬಾರಿಗೆ ವಿಶ್ವ ಉದ್ಯಮಶೀಲರ ದಿನ ಆಚರಿಸುತ್ತಿದೆ. ಸಮಾಜವನ್ನು ಸದೃಢವಾಗಿ ಕಟ್ಟಲು ಉದ್ಯಮಶೀಲತೆಯು ಸಹ ಬಹಳ ಮುಖ್ಯವಾಗಿದೆ. ಮತ್ತು ಯುವ ಜನರಲ್ಲಿ ಸಂಚಲನ ಮೂಡಿಸಲು ಕೌಶಲ್ಯ ಬೆಳಸಲು ೩೦ ವರ್ಷಗಳ ಹಿಂದೆಯೇ ಸಿಎಂ J.H.ಪಟೇಲ್ ಮತ್ತು ಕೈಗಾರಿಕಾ ಸಚಿವರಾಗಿದ್ದ R.V.ದೇಶಪಾಂಡೆ ಧಾರವಾಡದಲ್ಲಿ ಸಿಡಾಕ್ ಸಂಸ್ಥೆ ಸ್ಥಾಪಿಸಿರುವುದು ಪ್ರಶಂಸನೀಯ ಕಾರ್ಯವಾಗಿದೆ ಎಂದು ಸಿ.ಎಸ್ ಅಶ್ವಥ್ ನಾರಾಯಣ್ ಹೇಳಿದರು.

ಒಬ್ಬ ಉದ್ಯಮಿ ಯಶಸ್ಸಿಗೆ ವ್ಯಾಪಾರದ ಕೌಶಲ್ಯಗಳು ಬಹಳ ಅಗತ್ಯ. ಹಾಗಿರುವಾಗ ಮಾತ್ರ ಫಲ ಕಾಣಲು ಸಾಧ್ಯ. ವಿಜ್ಞಾನ, ತಂತ್ರಜ್ಞಾನದ ಯುಗದಲ್ಲಿ ಯಾವುದೇ ಹಳ್ಳಿಯಿಂದ ಬಂದಿರುವ ವ್ಯಕ್ತಿ ಉದ್ಯಮಶೀಲನಾಗಿ ಬೆಳೆಯಲು ಸಾಧ್ಯವಿದೆ. ಕೃಷಿ ಬೆಳೆ, ಉತ್ಪಾದನೆ ಮಾರುಕಟ್ಟೆ ಪರಸ್ಪರ ಅವಲಂಬಿತವಾಗಿವೆ, ಈಗಿನ ಡಿಜಿಟಲ್ ಮಾರುಕಟ್ಟೆಯಲ್ಲಿ ತಂತ್ರಜ್ಞಾನ ಬಳಸಿಕೊಂಡು ವ್ಯವಹಾರ ಮಾಡುತ್ತಿರುವ ಸಂಸ್ಥೆಗಳನ್ನೇ ಆಧರಿಸಿ ನಮ್ಮ ಉದ್ಯಮಗಳನ್ನು ಸಶಕ್ತಗೊಳಿಸಬೇಕು ಎಂದು ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.

error: Content is protected !!