ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವನಾದ ಮುರುಗೇಶ್ ನಿರಾಣಿ ಅವರ ಟ್ವಿಟ್ಟರ್ ಖಾತೆಯನ್ನು ಯಾರೋ ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ ಈ ಕುರಿತು ಸ್ವತಃ ಮುರುಗೇಶ್ ನಿರಾಣಿ ಅವರೆ, ತಮ್ಮ ಟ್ವಿಟ್ಟರ್ ಖಾತೆ @NiraniMurugesh ಯನ್ನು ಕೆಲ ಕೀಡಗೇಡಿಗಳು ಇವತ್ತು ಅಜ್ಞಾತ ವಿದೇಶಿ ಸ್ಥಳದಿಂದ ಹ್ಯಾಕ್ ಮಾಡಿದ್ದಾರೆ. ಆರೋಪಿಗಳ ನಿಖರವಾದ ಮೂಲ ಮತ್ತು ಗುರುತು ನಮಗೆ ಇನ್ನೂ ತಿಳಿದಿಲ್ಲ.
ಹ್ಯಾಕರ್ಗಳು ಪೋಸ್ಟ್ ಮಾಡುವ ಯಾವುದೇ ಮೋಸದ ಸಂದೇಶಗಳಿಗೆ ಯಾರು ಬಲಿ ಆಗಬೇಡಿ. ನನ್ನ ಖಾತೆಯಲ್ಲಿರುವ ಯಾವುದೇ ಅವಹೇಳನಕಾರಿ ಮತ್ತು ಅಸಂಸದೀಯ ಸಂದೇಶಗಳನ್ನು ನಿರ್ಲಕ್ಷಿಸಿ ಎಂದು ನಾನು ಎಲ್ಲರಿಗೂ ಮನವಿ ಮಾಡಿಕೊಳ್ಳುತ್ತಿದ್ದೆನೆ ಎಂದು ಖುದ್ದು ಮುರಗೇಶ್ ನಿರಾಣಿ ಹೇಳಿದ್ದಾರೆ. ನಾವು ಟ್ವಿಟರ್ಗೆಗೆ ದೂರು ನೀಡಿದ್ದೇವೆ. ಶೀಘ್ರದಲ್ಲೇ ಬೆಂಗಳೂರಿನ ಸೈಬರ್ ಸೆಲ್ ಪೊಲೀಸರಿಗೆ ದೂರು ನೀಡುತ್ತೇವೆ. ಈ ಹಿಂದೆಯು ಇದೇ ರೀತಿ ಹಲವು ದುಷ್ಕರ್ಮಿಗಳು ನನ್ನ ಫೇಸ್ ಬುಕ್ ಹ್ಯಾಕ್ ಮಾಡಿದ್ದರು ಎಂದು ನಿರಾಣಿಯವರು ತಿಳಿಸಿದ್ದಾರೆ.