ಹುಬ್ಬಳ್ಳಿ: ಮಗಳ ಹುಟ್ಟುಹಬ್ಬಕ್ಕೆ ಹೆಲ್ಮೆಟ್ ವಿತರಣೆ ಮಾಡಿದ ತಂದೆ ರಸ್ತೆ ಸುರಕ್ಷತೆಯ ಜಾಗೃತಿಯನ್ನು ಮೂಡಿಸಿ ಬೈಕ್ ಸವಾರರಿಗೆ ಹೆಲ್ಮೆಟ್ ಅನ್ನು ವಿತರಿಸಿದ್ದಾರೆ. ನಗರದ ಯುವ ಸಾಮಾಜಿಕ ಕಾರ್ಯಕರ್ತ ಮಂಜುನಾಥ ಹೆಬಸೂರು ತಮ್ಮ ಮಗಳು ಅಶ್ವಿಕಾಮಾನ್ಯಾ ಹೆಬಸೂರ ೨ನೇ ವರ್ಷದ ಹುಟ್ಟುಹಬ್ಬವನ್ನು ಆಚರಣೆ ಮಾಡಿದ್ದಾರೆ. ಬಳಿಕ ಮಗಳ ಹುಟ್ಟು ಹಬ್ಬದ ಅಂಗವಾಗಿ ಸಾರ್ವಜನಿಕರಿಗೆ ಹೆಲ್ಮೆಟ್ ವಿತರಣೆ ಮಾಡಿದ್ದಾರೆ.
ಹೆಲ್ಮೆಟ್ ಇಲ್ಲದೆ ಇರುವುದರಿಂದ ರಸ್ತೆ ಅಪಘಾತಗಳಲ್ಲಿ ಸಾಕಷ್ಟು ಸಾವು ಸಂಭವಿಸುತ್ತವೆ. ಹಾಗಾಗಿ ರಸ್ತೆ ಸುರಕ್ಷತೆ ಮತ್ತು ಹೆಲ್ಮೆಟ್ ಜಾಗೃತಿಯನ್ನು ಮಂಜುನಾಥ ಹೆಬಸೂರ ಜನರಲ್ಲಿ ಮೂಡಿಸಿದ್ದಾರೆ. ನಗರದ ಚೆನ್ನಮ್ಮ ವೃತ್ತದಲ್ಲಿ ಹೆಲ್ಮೆಟ್ ಇಲ್ಲದೇ ಸಂಚರಿಸುವ ಬೈಕ್ ಸವಾರರಿಗೆ ಹೆಲ್ಮೆಟ್ ವಿತರಿಸಿದ್ರು. ಕಳೆದ ವರ್ಷವು ಸಹ ಇಪ್ಪತ್ತೈದು ಹೆಲ್ಮೆಟ್ ನೀಡಲಾಗಿತ್ತು. ಈ ವರ್ಷವು ಸಹ ಇಪ್ಪತ್ತೈದು ಹೆಲ್ಮೆಟ್ ಸಾರ್ವಜನಿಕರಿಗೆ ವಿತರಿಸುವ ಮೂಲಕ ಜನರಲ್ಲಿ ಮತ್ತೊಮ್ಮೆ ಜಾಗೃತಿ ಮೂಡಿಸಿದ್ರು. ಈ ಸಂದರ್ಭದಲ್ಲಿ ಮಂಜುನಾಥ ಹಾಗೂ ಸುಪ್ರಿಯಾ ಹೆಬಸೂರ, ಲಿಂಗರಾಜ ಪಾಟೀಲ್, ಬಸವರಾಜ್ ಕುಂದಗೋಳಮಠ, ಸಂಚಾರಿ ಇನ್ಸ್ಪೆಕ್ಟರ್ ಎಸ್ ವಿ ಕಾಡದೇವರಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.