ಮೈಸೂರು: ಸಿದ್ದರಾಮಯ್ಯನವರಿಗೆ ಕೋವಿಡ್ ಬಂದ ಮೇಲೆ ತಾವು ಏನು ಮಾತನಾಡುತ್ತಿದ್ದಾರೆ ಎನ್ನುವುದೆ ಅವರಿಗೆ ಗೊತ್ತಾಗುತ್ತಿಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ಲೇವಡಿ ಮಾಡಿದ್ದಾರೆ.
ನಗರದಲ್ಲಿ ಮಾದ್ಯಮದವರ ಜೊತೆಗೆ ಮಾತನಾಡಿದ ಸೋಮಶೇಖರ್, ಸಿದ್ದರಾಮಯ್ಯನವರಿಗೆ ತಾಲಿಬಾನ್ ಗೊತ್ತಿಲ್ಲ, BJP ಗೊತ್ತಿಲ್ಲ. ಯಾವುದಕ್ಕೂ ಯಾವ ಸಂಬಂಧವೂ ಇಲ್ಲದೆ ಏನ್ ಎನೋ ಮಾತನಾಡುತ್ತಿದ್ದಾರೆ. RSS ಬಗ್ಗೆ ತಿಳಿದುಕೋಳ್ಳಬೇಕಾದ್ರೆ ಯಾವುದಾದ್ರು RSS ಶಾಖೆಗೆ ಬರ್ಲಿ. ಅವರು ಶಾಖೆಗೆ ಬರುವುದಾದ್ರೆ ನಾನೇ ಅವರನ್ನು ಖುದ್ದಾಗಿ ಒಂದು ಶಾಖೆಗೆ ಕರೆದುಕೊಂಡು ಹೋಗುತ್ತೇನೆ ಎಂದು ಸೋಮಶೇಖರ್ ಲೇವಡಿ ಮಾಡಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಮಾನಸಿಕವಾಗಿ ಏನಾಗಿದೆ ಎಂಬುದು ನನಗೆ ಗೊತ್ತಿಲ್ಲ. ಏನ್ ಎನೋ ಮಾತನಾಡುತ್ತಿದ್ದಾರೆ. ಅವರಿಗೆ ಮಾನಸಿಕವಾಗಿ ಏನಾಗಿದೆ ಎಂಬುದು ತಿಳಿಯುತ್ತಿಲ್ಲ. ಬೇಕಾದ್ರೆ ತಿಳಿದುಕೊಂಡು ಹೇಳುತ್ತೇನೆ ಎಂದು ತಿಳಿಸಿದ್ರು.