ಕೂಗು ನಿಮ್ಮದು ಧ್ವನಿ ನಮ್ಮದು

ಹೆಂಡತಿಗೆ ಟಿಕೆಟ್ ಗಿಟ್ಟಿಸಿಕೊಳ್ಳಲು ತೆರೆಮರೆಯ ಕಸರತ್ತು, ಬೆಂಗಳೂರಿನಲ್ಲೇ ಬೀಡುಬಿಟ್ಟ ಶಿವಕುಮಾರ ಉದಾಸಿ

ಹಾವೇರಿ: ಹಾನಗಲ್ ಉಪಚುನಾವಣೆ ಹಿನ್ನೆಲೆಯಲ್ಲಿ BJP ಹಾಗೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ತಮ್ಮದೆಯಾದ ಕಸರತ್ತು ನಡೆಸಿದ್ದಾರೆ. BJP ಪಕ್ಷದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸಂಸದ ಶಿವಕುಮಾರ್ ಉದಾಸಿ ತಮ್ಮ ಹೆಂಡತಿ ರೇವತಿ ಉದಾಸಿಗೆ ಟಿಕೆಟ್ ಕೊಡಿಸಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲೇ ಬೀಡು ಬಿಟ್ಟಿದ್ದಾರೆ. ಈ ಮೂಲಕ ತೆರೆಮರೆಯ ಕಸರತ್ತನ್ನು ಶಿವಕುಮಾರ್ ಉದಾಸಿ ನಡೆಸಿದ್ದಾರೆ.

ಸಂಸದ ಶಿವಕುಮಾರ ಉದಾಸಿ ಹೆಂಡತಿ ರೇವತಿ ಉದಾಸಿ, BJP ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಕೃಷ್ಣ ಈಳಗೇರ, ಮಾಜಿ ಶಾಸಕ ಶಿವರಾಜ ಸಜ್ಜನ ಸೇರಿದಂತೆ ಕೆಲವು ಆಕಾಂಕ್ಷಿಗಳು ತಮ್ಮದೆ ಆದ ಪಯತ್ನ ನಡೆಸುತ್ತಿದ್ದಾರೆ. ಇಂದು ಆಕಾಂಕ್ಷಿಗಳ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಮತ್ತು BJP ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಸಭೆ ನಡೆಸಲಿದ್ದಾರೆ.

ಇಂದು ಸಂಜೆ ೫ ಗಂಟೆಗೆ ಹಾನಗಲ್ ಪಟ್ಟಣದ ಉದಾಸಿ ಕಲ್ಯಾಣ ಮಂಟಪದಲ್ಲಿ ಈ ಸಭೆ ನಡೆಯಲಿದೆ. ಸಭೆಯಲ್ಲಿ ಆಕಾಂಕ್ಷಿಗಳ ಜೊತೆ ಮಾತುಕತೆ ಹಾಗೂ ಆಕಾಂಕ್ಷಿಗಳಿಂದ ಮನವಿ ಸ್ವೀಕರಿಸಲಿದ್ದಾರೆ. ಜಿಲ್ಲಾ ಹಾಗೂ ರಾಜ್ಯ ಮಟ್ಟದ ಕೋರ್ ಕಮಿಟಿ ಸಭೆ ಬಳಿಕ ರಾಜ್ಯ ಘಟಕದಿಂದ ಅಭ್ಯರ್ಥಿ ಹೆಸರು ಅಂತಿಮಯಾಗಲಿದೆ. ಆದ್ರೆ ಉಪಚುನಾವಣೆ ಘೋಷಣೆ ಬಳಿಕ ಶಿವಕುಮಾರ ಉದಾಸಿ ಬೆಂಗಳೂರಿನಲ್ಲೇ ಬೀಡುಬಿಟ್ಟು ಪತ್ನಿ ರೇವತಿ ಉದಾಸಿಗೆ ಟಿಕೆಟ್ ಗಿಟ್ಟಿಸಿಕೊಳ್ಳಲು ತೆರೆಮರೆಯ ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ.

error: Content is protected !!