ಯಾದಗಿರಿ: ಅತ್ಯಾಚಾರಕ್ಕೆ ನಿರಾಕರಿಸಿದ ಮಹಿಳೆಯನ್ನು ಪೆಟ್ರೋಲ್ ಹಾಕಿ ಸುಟ್ಟು ಕೊಲೆ ಮಾಡಿರುವ ಪ್ರಕರಣವನ್ನು CBIಗೆ ನೀಡುವಂತೆ ಆಗ್ರಹಿಸಿ ಸಂಬಂಧಿಕರು ಪ್ರತಿಭಟನೆ ಮಾಡಿದ್ದಾರೆ.
ಪ್ರಕರಣ ಸಂಬಂಧ ಈಗಾಗಲೇ ಪ್ರಮುಖ ಆರೋಪಿ ಬಂಧನವಾಗಿದ್ರು ಇನ್ನು ಉಳಿದ ಆರೋಪಿಗಳನ್ನು ಈ ಕೂಡಲೇ ಬಂಧನ ಮಾಡಬೇಕು. ಜೊತೆಗೆ ಈ ಪ್ರಕರಣವನ್ನು ಕೂಡಲೇ CBI ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯ ನಡೆಸಿ, ಮೃತ ಮಹಿಳೆಯ ಶವವನ್ನು ಮುಂದೆ ಇಟ್ಟುಕೊಂಡು ಸುರಪುರದಲ್ಲಿ ದಲಿತರ ಸಂಘಟನೆಗಳು ಹಾಗೂ ಕುಟುಂಬಸ್ಥರು ಪ್ರತಿಭಟನೆಯನ್ನು ನಡೆಸಿದ್ರು.
ಸುರಪುರ ನಗರದ ಗಾಂಧಿ ವೃತ್ತದಲ್ಲಿ ಈ ಪ್ರತಿಭಟನೆ ನಡೆಸಲಾಗುತ್ತಿದೆ. ಮೊನ್ನೆ ರಾತ್ರಿಯೇ ಸುರಪುರ ತಾಲೂಕಿನ ಚೌಡೇಶ್ವರಹಾಳ ಗ್ರಾಮದಲ್ಲಿ ಮಹಿಳೆಯ ಮೇಲೆ ಅದೇ ಗ್ರಾಮದ ಗಂಗಪ್ಪ ಅತ್ಯಾಚಾರಕ್ಕೆ ಪ್ರಯತ್ನಿಸಿದ್ದನು ಇದಕ್ಕೆ ಆ ಮಹಿಳೆಯು ಪ್ರತಿರೋಧ ವ್ಯಕ್ತಿಪಡಿಸಿದ್ದಾಳೆ. ಆದರಿಂದಾಗಿ ಗಂಗಪ್ಪ ಆಕೆಯ ಮೇಲೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ.
ಈ ಕಡೆ ಆ ಮಹಿಳೆಗೆ ಚಿಕಿತ್ಸೆ ಫಲಕಾರಿಯಾಗದೇ ಕಲಬುರಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಗಂಗಪ್ಪನನ್ನು ಸುರಪುರ ಪೊಲೀಸರು ಬಂಧನ ಮಾಡಿದ್ದಾರೆ. ಆದ್ರೆ ಇದು ಕುಟುಂಬಸ್ಥರಿಗೆ ಸಮಾಧಾನ ಆಗಿಲ್ಲ. ಹಾಗಾಗಿ ಪ್ರಕರಣದಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳನ್ನು ಬಂಧನ ಮಾಡಬೇಕು. ಜೊತೆಗೆ ಈ ಪ್ರಕರಣವನ್ನು ಈ ಕೂಡಲೇ CBI ತನಿಖೆಗೆ ಒಪ್ಪಿಸಬೇಕೆಂದು ಪ್ರತಿಭಟನೆ ನಡೆಸಿದ್ದಾರೆ.