ರಾಯಚೂರು: ನಗರದಲ್ಲಿ ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿರುವ ದಲಿತ ಸಂಘಟನೆಗಳ ಹೋರಾಟಗಾರರು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್‍ಗೆ ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ರು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು, ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಪ್ರಭು ಚವ್ಹಾಣ್ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಸದಾಶಿವ ಆಯೋಗ ವರದಿ ಜಾರಿಗೆಗೆ ವಿರೋಧ ವ್ಯಕ್ತಪಡಿಸಿರುವ ಸಚಿವರ ಕ್ರಮ ಖಂಡಿಸಿ ಘೋಷಣೆ ಕೂಗಿದ್ರು. ಜೊತೆಗೆ ಕಪ್ಪು ಪಟ್ಟಿ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದ್ರು. ಸದ್ಯ ಘೇರಾವ್ ಹಾಕಿದ ೩ ಜನ ಹೋರಾಟಗಾರರನ್ನು ಬಂಧಿಸಲಾಗಿದೆ. ಇದಕ್ಕೂ ಮುಂಚಿತವಾಗಿ ಪ್ರಭು ಚವ್ಹಾಣ್ ರಾಯಚೂರು ತಾಲೂಕಿನ ಮಲಿಯಾಬಾದ್ ಗೋ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.
ಈ ವೇಳೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಅಡಿ ೪೦೦ ಕೇಸ್ ದಾಖಲಾಗಿವೆ. ಹತ್ತು ಸಾವಿರ ಗೋಗಳ ರಕ್ಷಣೆ ಮಾಡಿದ್ದೇವೆ ಎಂದ್ರು. ನಂತರ ಗೋ ಸಂಜೀವಿನಿ ಯೋಜನೆ ಮುಖಾಂತರ ಆಂಬುಲೆನ್ಸ್ ನೀಡಿದ್ದೇವೆ. ಗೋವುಗಳ ಆರೋಗ್ಯದ ದೃಷ್ಟಿಯಿಂದ ಗೋ ಸಂಜೀವಿನಿ ಜಾರಿಗೆ ಮಾಡಿದ್ದೇವೆ. ರಾಜ್ಯದ ಎಲ್ಲಾ ತಾಲೂಕಿಗೂ ೧ ಆಂಬುಲೆನ್ಸ್ ಬರುತ್ತದೆ ಎಂದು ಹೇಳಿದ್ರು.