ಕೂಗು ನಿಮ್ಮದು ಧ್ವನಿ ನಮ್ಮದು

ಸ್ವಾವಲಂಬಿ ಜೀವನ ನಡೆಸಲು ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ

ಮಡಿಕೇರಿ: ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ, ಆಯ್ಕೆಯಾದ ವಿಕಲಚೇತನ ಫಲಾನುಭವಿಗಳಿಗೆ ಇವತ್ತು ದ್ವಿಚಕ್ರ ವಾಹನಗಳನ್ನು ವಿತರಿಸಲಾಗಿದೆ.
ಮಡಿಕೇರಿಯಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆಯಡಿ ೨೦೨೦-೨೧ನೇ ಸಾಲಿಗೆ ಕೊಡಗು ಜಿಲ್ಲೆಯಲ್ಲಿ ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮುದ್ದಣ್ಣ ಸಮ್ಮುಖದಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲಾಯಿತು.

ಜಿಲ್ಲೆಯಲ್ಲಿ ಇರುವ ವಿಕಲಚೇತನರು ಹಾಗೂ ಹಿರಿಯ ನಾಗರೀಕರು ಸ್ವಾವಲಂಬಿ ಜೀವನ ನಡೆಸಲು ಮತ್ತು ಬೇರೆಯವರಿಗೂ ತೊಂದ್ರೆ ಕೊಡದೆ, ಬದುಕು ನಡೆಸಲು ಯಂತ್ರಚಾಲಿತ ದ್ವಿಚಕ್ರ ವಾಹನಗಳಿಗೆ ಅರ್ಜಿ ಹಾಕಿದ್ರು. ಈ ಹಿನ್ನೆಲೆ ಇಲಾಖೆಯ ಅಧಿಕಾರಿಗಳು ಜಿಲ್ಲೆಯಲ್ಲಿ ಇರುವ ವಿಶೇಷ ಚೇತನರ ಸರ್ವೆ ಕಾರ್ಯ ಮಾಡಲಾಗಿದ್ದು, ಆಯ್ಕೆಯಾದ ವಿಕಲಚೇತನ ಫಲಾನುಭವಿಗಳಿಗೆ ಇವತ್ತು ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಹಸ್ತಾಂತರ ಮಾಡಲಾಯ್ತು.

ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲಾ, ನಿರೂಪಣಾಧಿಕಾರಿ ಪೂಣಚ್ಚ, ಜಿಲ್ಲಾ ದಿವ್ಯಾಂಗ ಒಕ್ಕೂಟ ಅಧ್ಯಕ್ಷರಾದ ಮಹೇಶ್ವರ್, ಉಪಾಧ್ಯಕ್ಷೆ ಆಯಿಷಾ, ಕಾರ್ಯದರ್ಶಿ ಲೋಹಿತ್ ಹಾಗೂ ವಿಕಲಚೇತನ ಇಲಾಖೆಯ ಸಿಬ್ಬಂದಿ ಹಾಜರಿದ್ರು.

error: Content is protected !!