ಹುಕ್ಕೇರಿ ನಗರದ ಹುಕ್ಕೇರಿ ಹಿರೇಮಠದ ದಸರಾ ಉತ್ಸವ ಕಾರ್ಯಕ್ರಮ ನಿಮಿತ್ಯ ಚಂಡಿಕಾ ಯಾಗದಲ್ಲಿ ಬಾಗಿ ಯಾಗಿ ಶ್ರೀ ಸರಸ್ವತಿ ಮಹಾಮಂಡಲಕ್ಕೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ಬೆಳಗಾವಿ ಗ್ರಾಮೀಣ ಭಾಗದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ರವರು ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ನಮ್ಮ ಪ್ರತಿಯೊಂದು ಕಾರ್ಯಕ್ಕೂ ಸಲಹೆ ನೀಡಿ ಹೆಚ್ಚು ಹೆಚ್ಚು ಸಾಮಾಜಿಕ ಕಾರ್ಯ ಮಾಡಲು ಸ್ಪೂರ್ತಿ ಎಂದರು.
ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡುತ್ತಾ ಲಕ್ಷ್ಮೀ ಹೆಬ್ಬಾಳಕರ ರವರು 7 ವರ್ಷಗಳ ಹಿಂದೆ ಶ್ರೀ ಮಠದ ದಸರಾ ಉತ್ಸವದಲ್ಲಿ ಭಾಗವಹಿಸಿದ್ದರು. ಅವರು ಸೌಮ್ಯ ಸ್ವಭಾವದ ನಾಯಕಿ ಅವರ ತಾಳ್ಮೆ ಸಾಮಾಜಿಕ ಕಾರ್ಯ ಅನುಪಮ. ಅವರು ಕಾಂಗ್ರೆಸ್ ಪಕ್ಷದ ವಕ್ತಾರರಾಗಿ ಮತ್ತು ಬೆಳಗಾವಿ ಗ್ರಾಮೀಣ ಭಾಗದ ಜನರ ಕಷ್ಟದಲ್ಲಿ ಭಾಗಿಯಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಇನ್ನಷ್ಟು ಅಧಿಕಾರ ಸಿಗಲಿ ಎಂದು ಹಾರೈಸಿದರು.
ನಂತರ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರರವರ ಪುತ್ರ ಮೃಣಾಲ ಹೆಬ್ಬಾಳಕರ, ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ಆಶಿರ್ವಾದ ನಮ್ಮ ಮನೆತನದ ಮೇಲೆ ಸದಾ ಇದೆ. ಇವತ್ತು ದಸರಾ ಉತ್ಸವದಲ್ಲಿ ಭಾಗವಹಿಸಿ ಚಂಡಿಕಾ ಯಾಗ , ಸರಸ್ವತಿ ಮಹಾಮಂಡಲ ಪೂಜೆ ಸಲ್ಲಿಸಿ ಶ್ರೀ ಗುರುಶಾಂತೆಶ್ವರ ಆಶಿರ್ವಾದ ಪಡೆದಿದ್ದೇವೆ. ಹುಕ್ಕೇರಿ ಹಿರೇಮಠ ಪ್ರತಿಯೊಂದು ರಂಗದಲ್ಲೂ ಮುಂಚೂಣಿ ಸ್ಥಾನದಲ್ಲಿದೆ ಶ್ರೀ ಗಳ ಆಶೀರ್ವಾದ ಎಲ್ಲರಿಗೂ ದೊರೆಯಲಿ ಎಂದರು .
ಆಸ್ಥಾನ ವಿದ್ವಾಂಸರಾದ ಸಂಪತ್ತಕುಮಾರ ಶಾಸ್ತ್ರಿಗಳ ವೈದಿಕತ್ವದಲ್ಲಿ ನೂರಾ ಎಂಟು ವಟುಗಳ ವೇದ ಪಠಣದೊಂದಿಗೆ ಚಂಡಿಕಾ ಯಾಗ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮದಲ್ಲಿ ಹುಕ್ಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ರೇಖಾ ಚಿಕ್ಕೋಡಿ ಅಕ್ಷರ ದಾಸೋಹ ಅಧಿಕಾರಿ ಶ್ರಿಶೈಲ ಹಿರೇಮಠ , ಮುರುಗೇಶ ಅಥಣಿ ಸುರೇಶ್ ಜಿನರಾಳಿ ಹಾಗೂ ಚನ್ನಪ್ಪ ಗಜಬರ ಉಪಸ್ಥಿತರಿದ್ದರು.