ಕೂಗು ನಿಮ್ಮದು ಧ್ವನಿ ನಮ್ಮದು

ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ, ಹತ್ತು ಜನ ಸಜೀವ ದಹನ

ಮುಂಬೈ: ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಹತ್ತು ಜನ ಸಜೀವ ದಹನಗೊಂಡಿರುವ ಘಟನೆಯು ಮಹಾರಾಷ್ಟ್ರದಲ್ಲಿ ಸಂಭವಿಸಿದೆ. ಮಹಾರಾಷ್ಟ್ರದ ಅಹ್ಮದ್‍ನಗರದಲ್ಲಿರುವ ಜಿಲ್ಲಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇವತ್ತು ಮುಂಜಾನೆ ಸುಮಾರು ೧೧ ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಕೋವಿಡ್- ೧೯ಚಿಕಿತ್ಸೆ ಪಡೆಯುತ್ತಿದ್ದ ಸುಮಾರು ೧೦ ಜನ ಸೋಂಕಿತರು ಮೃತಪಟ್ಟಿದ್ದಾರೆ.

ಜೊತೆಗೆ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಕುರಿತಂತೆ ಜಿಲ್ಲಾಧಿಕಾರಿ ರಾಜೇಂದ್ರ ಭೋಸಲೆ, ಇದೀಗ ಉಳಿದಿರುವ ರೋಗಿಗಳನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಒಟ್ಟು ICU ವಾರ್ಡ್‍ನಲ್ಲಿ ೧೭ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ರು. ಈ ಪೈಕಿ ಹತ್ತು ಜನ ಬೆಂಕಿಗೆ ಆಹುತಿಯಾಗಿದ್ದಾರೆ. ಸತ್ತವರೆಲ್ಲರೂ ಕೋವಿಡ್ -೧೯ಗೆ ಚಿಕಿತ್ಸೆ ಪಡೆಯುತ್ತಿದ್ರು ಎಂದು ತಿಳಿಸಿದ್ರು. ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್‍ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಹೇಳಿದರು.

error: Content is protected !!