ಬೆಂಗಳೂರು: ಹಿಂದುತ್ವ ಹಾಗೂ ಹಿಂದೂಯಿಸಂ ಎರಡು ಒಂದೇ ಅಲ್ಲ ಎಂದು ಸ್ಯಾಂಡಲ್‍ವುಡ್ ನಟಿ ರಮ್ಯಾ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವ ಮೂಲಕವಾಗಿ ಸುದ್ದಿಯ ಆಗಿದ್ದಾರೆ. ಹಿಂದುತ್ವ ಹಾಗೂ ಹಿಂದೂಯಿಸಂ ಎರಡೂ ಒಂದೇ ಅಲ್ಲ. ಹಿಂದೂಯಿಸಂ ಎಂಬುದು ರಾಜಕೀಯವಲ್ಲ. ಆದ್ರೆ ಹಿಂದುತ್ವ ಎಂಬುದು ರಾಜಕೀಯವಾಗಿದೆ. ಹಿಂದೂಯಿಸಂ ಎಂದ್ರೆ ಎಲ್ಲರನ್ನೂ ಒಳಗೊಳ್ಳುವಂತದ್ದು ಜೊತೆಗೆ ಎಲ್ಲರಿಗೂ ಪ್ರೀತಿ ಹಂಚುವಂತದ್ದು ಅದಕ್ಕೆ ವಿರುದ್ಧವಾದ್ದದ್ದೇ ಹಿಂದುತ್ವ
ನಿಜವಾದ ಹಿಂದುಗಳಿಗೆ ವ್ಯತ್ಯಾಸ ತಿಳಿಯುತ್ತದೆ ಎಂದು ನಟಿ ರಮ್ಯಾ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕಿದ್ದಾರೆ. ನಮ್ಮ ಪುರಾತನ ಹಿಂದೂ ಧರ್ಮವು ರಾಜಕಾರಣಿಗಳಿಂದ ಒಂದು ರಾಜಕೀಯ ಸಾಧನವಾಗಿ ಬಳಕೆ ಆಗುತ್ತಿರುವುದನ್ನು ನೋಡಲು ನೋವಾಗುತ್ತದೆ. ನಾನು ಹಿಂದೂ ಅಷ್ಟೇ. ಯಾವ ಪಕ್ಷ ಕೂಡ ನನ್ನ ಹಿಂದೂಯಿಸಂ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ. ಎಂದು ರಮ್ಯಾ ತಮ್ಮ ಅಭಿಪ್ರಾಯ ತಿಳಿಸಿದ್ರು.
ರಮ್ಯಾ ಈ ಪೋಸ್ಟ್ ಮಾಡುತ್ತಿದ್ದಂತೆ ನೆಟ್ಟಿಗರು ಕಾಮೆಂಟ್ ಮಾಡುತ್ತಾ ತಮ್ಮ ಅಭಿಪ್ರಾಯವನ್ನು ಸೂಚಿಸುತ್ತಿದ್ದಾರೆ. ಹಲವರು ಮೆಚ್ಚುಗೆ ಸೂಚಿಸಿದ್ದಾರೆ, ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ನಿಮ್ಮಿಂದ ನಾವು ಹಿಂದೂ ಧರ್ಮದ ಬಗ್ಗೆ ಪಾಠ ಕಲಿಯಬೇಕಾಗಿಲ್ಲ ಎಂದು ಕುಟುಕಿದ್ದಾರೆ ಎರಡು ದಿನಗಳ ಹಿಂದೆ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಕಾಂಗ್ರೆಸ್ ಪಕ್ಷದ ಡಿಜಿಟಲ್ ಅಭಿಯಾನವಾದ ಜನ್ ಜಾಗರಣ ಅಭಿಯಾನದ ಉದ್ಘಾಟನೆ ಮಾಡಿದ್ರು.
ಈ ಸಮಯದಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮ ಹಾಗೂ ಹಿಂದುತ್ವದ ನಡುವಿನ ವ್ಯತ್ಯಾಸವೇನು? ಅವು ಒಂದೇ ಆಗಿರಬಹುದೇ? ಒಂದೇ ಆಗಿದ್ರೆ, ಏಕೆ ಒಂದೇ ಹೆಸರಿಲ್ಲ? ವಿಭಿನ್ನ ವಿಷಯಗಳಾಗಿವೆ ಎಂದು ಹೇಳಿದ್ರು. ಇದೇ ವಿಚಾರವಾಗಿ ನಟಿ ರಮ್ಯಾ ಸಹ ಮಾತನಾಡಿದ್ರು. ರಮ್ಯಾ ಸಿನಿಮಾ ಕ್ಷೇತ್ರದಿಂದ ದೂರವಾಗಿದ್ದಾರೆ. ಆದ್ರೆ ಸೋಶಿಯಲ್ ಮೀಡಿಯಾದಲ್ಲಿ ಮಾತ್ರ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಕೆಲವು ವಿಚಾರವಾಗಿ ತಮ್ಮ ಅನಿಸಿಕೆಗಳನ್ನು ತಮ್ಮದೇ ಆಗಿರುವ ರೀತಿಯನ್ನು ಅಭಿಮಾನಿಗಳ ಜೊತೆಗೆ ಹಂಚಿಕೊಳ್ಳುತ್ತಿರುತ್ತಾರೆ.