ನವದೆಹಲಿ: ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ೩ ವಿವಾಧಿತ ಕೃಷಿ ಕಾನೂನನ್ನು ಸರ್ಕಾರ ವಾಪಸ್ ಪಡೆದುಕೊಂಡಿದೆ. ೩೫೫ ದಿನಗಳ ಸುದೀರ್ಘವಾದ ರೈತರ ಹೋರಾಟಕ್ಕೆ ಈಗ ಫಲ ಸಿಕ್ಕಿದೆ. ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ರು. ಈ ವೇಳೆಯಲ್ಲಿ ರೈತರ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಲು ಪ್ರಯತ್ನ ಮಾಡಲಾಗುತ್ತಿದ್ದು, ಮೂರು ಕಾಯ್ದೆ ಜಾರಿಗೆ ತಂದಿದ್ದೆವು. ಸಣ್ಣ ರೈತರ ಒಳಿತಿಗಾಗಿಯೇ ಕೃಷಿ ಕಾಯ್ದೆ ಜಾರಿಗೆ ತಂದಿದ್ದೆವು. ಈ ಮೂರು ಕಾನೂನುಗಳು ಸಂಪೂರ್ಣವಾಗಿ ರೈತರ ಪರವಾಗಿದ್ದವು. ರೈತರ ಹಿತ ದೃಷ್ಟಿಯಲ್ಲಿಟ್ಟುಕೊಂಡೇ ಕಾಯ್ದೆ ಜಾರಿ ಮಾಡಲಾಗಿತ್ತು ಎಂದು ಪ್ರಧಾನಿ ಮೋದಿ ಅವರು ಹೇಳಿದ್ರು.
ಯೋಜನೆ ಬಗ್ಗೆ ರೈತರಿಗೆ ತಿಳಿಸುವಲ್ಲಿ ಸಾಕಷ್ಟು ಯತ್ನಿಸಿದ್ದೇವೆ. ಆದ್ರೆ ಹಲವು ರೈತರು ಕಾಯ್ದೆಯನ್ನು ಅವರ ಸಲಹೆ ಒಪ್ಪಿಕೊಂಡಿದ್ರು ವಿರೋಧಿಸುತ್ತಿದ್ದಾರೆ. ರೈತರ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ೩ ಕೃಷಿ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಲಾಗಿದೆ. ಎಂದು ನರೇಂದ್ರ ಮೋದಿಯವರು ಘೋಷಿಸಿದ್ದಾರೆ.
ರೈತರ ಸಮಸ್ಯೆ ಬಗೆಹರಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ದೇಶದಲ್ಲಿ ೧೦೦ ರಲ್ಲಿ ೮೦ ಪ್ರತಿಶತ ರೈತರು ಸಣ್ಣ ಹಿಡುವಳಿ ರೈತರಾಗಿದ್ದು, ಹತ್ತು ಕೋಟಿಗಿಂತ ಹೆಚ್ಚು ಸಣ್ಣ ರೈತರಿದ್ದಾರೆ.
ರೈತರ ಸಮಸ್ಯೆಗಳನ್ನು ನಾನು ಅರಿತಿದ್ದೇನೆ. ಅದನ್ನು ಬಗೆಹರಿಸಲು ಪ್ರಯತ್ನ ಮಾಡಲಾಗುತ್ತಿದೆ. ಬೀಜ, ವಿಮೆ, ಮಾರುಕಟ್ಟೆ, ಉಳಿತಾಯಕ್ಕೆ ಯೋಜನೆಗಳಿಗಾಗಿ ರೈತರಿಗೆ ಫಸಲ್ ಬಿಮಾ, ಪೆನ್ಷನ್ ಯೋಜನೆ ಜಾರಿಗೆ ತಂದಿದ್ದೇವೆ ಎಂದು ಮೋದಿ ತಿಳಿಸಿದ್ರು. ಕೃಷಿ ಮಾರುಕಟ್ಟೆ ಆಧುನೀಕರಣಕ್ಕೆ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗುತ್ತಿದೆ. ರೈತರು ಈಗ ಎಲ್ಲಿ ಬೇಕಾದ್ರು ತಮ್ಮ ಬೆಳೆ ಮಾರಬಹುದು. ಕೃಷಿ ಬಜೆಟ್ ಮೊದಲಿಗಿಂತ ೫ ಪಟ್ಟು ಹೆಚ್ಚಿಸಿದ್ದೇವೆ. ರೈತರಿಗೆ ೨೨ ಕೋಟಿ ಸಾಯಿಲ್ ಹೆಲ್ತ್ ಕಾರ್ಡ್ ನೀಡಿದ್ದೇವೆ ಎಂದು ನರೇಂದ್ರ ಮೋದಿ ಅವರು ತಿಳಿಸಿದ್ರು.