ಕೂಗು ನಿಮ್ಮದು ಧ್ವನಿ ನಮ್ಮದು

ಎದೆಯಗಲ ಎಷ್ಟೇ ಇಂಚಿನದ್ದಾಗಿರ್ಲಿ, ಜನಶಕ್ತಿಯ ಎದುರು ಮಣಿಯಲೇಬೇಕು: ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ವಿವಾದಿತ ಕೃಷಿ ಕಾನೂನು ವಾಪಸ್ ಪಡೆದುಕೊಂಡಿರುವ ಕುರಿತಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡುವ ಮೂಲಕವಾಗಿ ರೈತರಿಗೆ ಅಭಿನಂದನೆಯನ್ನು ಸಲ್ಲಿಸಿದ್ರು.
ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ. ರೈತ ಹೋರಾಟಗಾರರಿಗೆ ಅಭಿನಂದನೆಗಳನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ರು.

ಕೃಷಿಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ ಇಪ್ಪತೈದು ಲಕ್ಷ ರೂಪಾಯಿಗಳು ಪರಿಹಾರ ಕೊಡಬೇಕೆಂದು ಒತ್ತಾಯಿಸುತ್ತೇನೆ ಎಂದ್ರು. ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು.

ಇದುವೇ ರೈತರ ಸ್ವಾತಂತ್ರ್ಯೋತ್ಸವ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೃಷಿ ಕಾಯ್ದೆಯಷ್ಟೇ ಅಲ್ಲ, ಕೇಂದ್ರ ಸರ್ಕಾರದ ಪ್ರತಿಯೊಂದು ನೀತಿ ಹಾಗೂ ಕಾರ್ಯಕ್ರಮಗಳು ರೈತ ವಿರೋಧಿಯಾದುದು. ಇದು ವಿರಮಿಸುವ ಕಾಲ ಅಲ್ಲ, ರೈತ ವಿರೋಧಿ BJP ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದ್ರು. ರೈತರ ಹೋರಾಟಕ್ಕೆ ಸಿಕ್ಕ ಗೆಲುವಿನ ಸ್ಪೂರ್ತಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರುದ್ಧದ ಜನ ಹೋರಾಟಕ್ಕೆ ನಾಂದಿಯಾಗಲಿದೆ. ಪೆಟ್ರೋಲ್ ಮತ್ತು ಡೀಸೆಲ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆ ವಿರುದ್ಧದ ಹೋರಾಟಕ್ಕೆ ದೇಶದ ಜನ ಅಣಿಯಾಗಿದ್ದಾರೆ.

error: Content is protected !!