ಹುಬ್ಬಳ್ಳಿ: ಶಾಲೆಯಲ್ಲಿ ಇಬ್ಬರು ಮಕ್ಕಳಿಗೆ ಕೋವಿಡ್ ಪಾಸಿಟಿವ್ ಬಂದಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತ ಶಾಲೆಯೊಂದನ್ನು ಸೀಲ್ ಡೌನ್ ಮಾಡಿ ಆದೇಶ ಹೊರಡಿಸಿದೆ.
ಹುಬ್ಬಳ್ಳಿಯ ವಿದ್ಯಾನಗರದ ಸೇಂಟ್ ಅಂಥೋನಿ ಶಾಲೆಯಲ್ಲಿ ಇಬ್ಬರಿಗೆ ಪಾಸಿಟಿವ್ ಬಂದಿರುವ ಹಿನ್ನಲೆಯಲ್ಲಿ ಈಗಾಗಲೇ 80% ವಿದ್ಯಾರ್ಥಿಗಳ ಕೋವಿಡ್ ಟೆಸ್ಟ್ ಕೂಡ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲೆಗೆ ಸ್ಯಾನಿಟೈಸರ್ ಮಾಡಲಾಗುತ್ತಿದೆ.
ಈಗಾಗಲೇ ವೀಕೆಂಡ್ ಕರ್ಫ್ಯೂ ಜಾರಿಯಾಗಿದ್ದು, ಶಾಲೆ ಕಾಲೇಜುಗಳು ಬಂದ್ ಮಾಡಲಾಗಿದೆ. ಅಲ್ಲದೇ ಜಿಲ್ಲಾಡಳಿತದ ಮುಂದಿನ ಆದೇಶದವರೆಗೂ ವಿದ್ಯಾನಗರದ ಸೇಂಟ್ ಅಂಥೋನಿ ಶಾಲೆಯನ್ನು ಬಂದ್ ಮಾಡಲಾಗಿದೆ.