ತುಮಕೂರು: ನಗರದ ಎಂಪ್ರೆಸ್ ಕಾಲೇಜಿಗೆ ವಿದ್ಯಾರ್ಥಿನಿಯರು ಬುರ್ಖಾ ಹಾಕಿಕೊಂಡು ಅಲ್ಲಾ ಹೂ ಅಕ್ಬರ್ ಎಂದು ಘೋಷಣೆ ಕೂಗುತ್ತಾ ಆಗಮಿಸಿದ್ದಾರೆ. ರಾಜ್ಯದಲ್ಲಿ ಹಿಜಾಬ್ ಪ್ರತಿಭಟನೆ ಮುಂದುವರೆದಿದ್ದು, ಹೈಕೋರ್ಟ್ ತನ್ನ ಮುಂದಿನ ಆದೇಶದವರೆಗೂ ಶಾಲಾ,ಕಾಲೇಜಿನಲ್ಲಿ ಹಿಜಾಬ್ ಧರಿಸದಂತೆ ಸೂಚಿಸಿದೆ. ಆದ್ರು ಕೆಲ ವಿದ್ಯಾರ್ಥಿನಿಯರು ತಮ್ಮ ಪಟ್ಟು ಬಿಡದೇ ಹಿಜಾಬ್ ಹಾಕಿಕೊಂಡು ಶಾಲಾ, ಕಾಲೇಜಿಗೆ ಹಾಜರಾಗುತ್ತಿದ್ದಾರೆ. ಇವತ್ತು ತುಮಕೂರು ನಗರದ ಎಂಪ್ರೆಸ್ ಕಾಲೇಜಿಗೆ ವಿದ್ಯಾರ್ಥಿನಿಯರು ಮತ್ತೆ ಎಂದಿನಂತೆ ಬುರ್ಖಾ ಹಾಕಿಕೊಂಡು ಅನೇಕ ವಿದ್ಯಾರ್ಥಿನಿಯರು ಬಂದಿದ್ದಾರೆ.
ಇನ್ನೂ ಕಾಲೇಜಿನಲ್ಲಿ ಬುರ್ಖಾ ತೆಗೆದಿಡಲು ಪ್ರತ್ಯೇಕ ಕೊಠಡಿ ಮೀಸಲಿಡಲಾಗಿದ್ದು, ಕೆಲ ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ತರಗತಿಗೆ ಹಾಜರಾಗಿದ್ದರು. ಆದ್ರೆ ಇನ್ನೂ ಕೆಲ ವಿದ್ಯಾರ್ಥಿನಿಯರು ನಿಗದಿತಪಡಿಸಿದ ಕೊಠಡಿಯಲ್ಲಿ ಹಿಜಾಬ್ ತೆಗೆಯದೇ ಪಟ್ಟು ಹಿಡಿದಿದ್ದಾರೆ. ಈ ವೇಳೆ ಕಾಲೇಜಿನ ಸಿಬ್ಬಂದಿ, ಪ್ರಾಂಶುಪಾಲರು ಬುರ್ಖಾ ತೆಗೆಯುವಂತೆ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದ್ರು.
ಹೀಗಿದ್ದರೂ ಹಿಜಾಬ್ ತೆಗೆಯಲು ವಿದ್ಯಾರ್ಥಿಗಳು ಹಿಂದೇಟು ಹಾಕಿದ್ರು. ನಮಗೆ ಶಿಕ್ಷಣ, ಧರ್ಮ ಎರಡೂ ಮುಖ್ಯ. ಕೋರ್ಟ್‍ಗಿಂತ ನಮಗೆ ಧರ್ಮ ಮುಖ್ಯ ಎಂದಿದ್ದಾರೆ. ಹಿಜಾಬ್ ಧರಿಸಿ ತರಗತಿಗೆ ಹೋಗಲು ಅವಕಾಶ ಕೊಡದ ಹಿನ್ನೆಲೆ ಅಲ್ಲಾ ಹೂ ಅಕ್ಬರ್ ಎಂದು ಘೋಷಣೆ ಕೂಗುತ್ತಾ ವಿದ್ಯಾರ್ಥಿಗಳು ಮನೆಗೆ ವಾಪಸ್ ಹೋದರು.