ಕೂಗು ನಿಮ್ಮದು ಧ್ವನಿ ನಮ್ಮದು

ಹಿಜಾಬ್ ಹೈಡ್ರಾಮಾ: ಬೆಳಗಾವಿಯಲ್ಲಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ 6 ಯುವಕರು ವಶಕ್ಕೆ

ಬೆಳಗಾವಿ: ನಗರದ ವಿಜಯ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಹಿಜಾಬ್‍ಗೆ ಅವಕಾಶ ನೀಡುವಂತೆ ವಿದ್ಯಾರ್ಥಿನಿಯರು ಪಟ್ಟು ಹಿಡಿದು ಪ್ರತಿಭಟನೆಗೆ ಮುಂದಾದಾಗ ಅಲ್ಲಾ ಹು ಅಕ್ಬರ್ ಎಂದು ಘೋಷಣೆ ಕೂಗಿದ ಆರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿಯ ಸದಾಶಿವ ನಗರದ ವಿಜಯ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾಲೇಜಿನಲ್ಲಿದ್ದು ಈ ಪೈಕಿ 50ರಷ್ಟು ವಿದ್ಯಾರ್ಥಿನಿಯರು ಮುಸ್ಲಿಂ ಸಮಾಜದವರಿದ್ದಾರೆ.

ಇದರಲ್ಲಿ ಇವತ್ತು 20ಕ್ಕೂ ಹೆಚ್ಚು ಜನ ವಿದ್ಯಾರ್ಥಿನಿಯರು ತರಗತಿಯಲ್ಲಿ ಹಿಜಾಬ್ ಗೆ ಅವಕಾಶ ನೀಡುವಂತೆ ಪಟ್ಟು ಹಾಡಿದ್ದಾರೆ. ಆದರೆ, ಕಾಲೇಜು ಆಡಳಿತ ಮಂಡಳಿ ಕೋರ್ಟ್ ಆದೇಶವನ್ನು ಪಾಲನೆ ಮಾಡುವಂತೆ ಖಡಕ್ ಸೂಚನೆ ಕೊಟ್ಟಿದೆ. ಹೀಗಾಗಿ ವಿದ್ಯಾರ್ಥಿನಿಯರು ಕ್ಲಾಸ್‍ಗೆ ಬಹಿಷ್ಕಾರ ಹಾಕಿ ಹೊರ ಹೋಗುತ್ತಿದ್ರು. ಈ ವೇಳೆ ವಿದ್ಯಾರ್ಥಿಗಳಿಗೆ ಕಾಲೇಜು ಸಿಬ್ಬಂದಿ ಹಾಗೂ ಪೊಲೀಸರು ವಿದ್ಯಾರ್ಥಿಗಳನ್ನು ತಡೆದು ಒಳಗಡೆ ಕೌನ್ಸಿಲ್ ಮಾಡಲು ಮುಂದಾಗಿದ್ದಾರೆ.

ಈ ಸಮಯದಲ್ಲಿ ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಹಿಜಾಬ್ ತೆಗೆಯುವುದಿಲ್ಲ ಕಾಲೇಜು ಒಳಗೆ ಹೋಗುವುದಿಲ್ಲ ಎಂದು ವಿದ್ಯಾರ್ಥಿನಿಯರು ಪಟ್ಟು ಹಿಡಿದ್ದಾರೆ. ಈ ವಿಷಯ ವಿದ್ಯಾರ್ಥಿನಿಯರ ಪೋಷಕರಿಗೆ ತಿಳಿಯುತ್ತಿದ್ದಂತೆ ಕಾಲೇಜಿನತ್ತ ಯುವಕರ ಗುಂಪು ಆಗಮಿಸಿದೆ. ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಲ್ಲದೇ ಪ್ರಾಂಶುಪಾಲರ ವಿರುದ್ಧ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಮಯದಲ್ಲಿ ಸ್ಥಳಕ್ಕೆ ಆಗಮಿಸಿದ DCP ರವೀಂದ್ರ ಗಡಾದಿ ವಿದ್ಯಾರ್ಥಿಗಳ ಮನವೊಲಿಸಲು ಪ್ರಯತ್ನಿಸಿದ್ರು. ಈ ವೇಳೆ ಕೆಲವು ಯುವಕರು ಅಲ್ಲಾ ಹು ಅಕ್ಬರ್ ಅಂತಾ ಘೋಷಣೆ ಕೂಗಿದರು. ಘೋಷಣೆ ಕೂಗಿದ 6 ಜನ ಯುವಕರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

error: Content is protected !!