ಬೆಂಗಳೂರು: ಸಚಿವ K.S ಈಶ್ವರಪ್ಪ ಸ್ಥಳೀಯ ಜನಪ್ರತಿನಿಧಿ. ಹಾಗಾಗಿ ಅವರು ಹಾಗೆ ಹೇಳಿರಬಹುದು ಎಂದು BJP ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ C.T ರವಿ ಸಮರ್ಥನೆ ಮಾಡಿಕೊಂಡಿದ್ದಾರೆ.
ಮಾದ್ಯಮದವರೊಂದಿಗೆ ಮಾತನಾಡಿದ C.T ರವಿ ಶಿವಮೊಗ್ಗದಲ್ಲಿ ನಡೆದ ಕೊಲೆ ಖಂಡನೀಯ. ಆದಷ್ಟೂ ಶೀಘ್ರವಾಗಿ ಕೊಲೆ ಮಾಡಿದವರನ್ನು ಬಂಧಿಸಬೇಕು.
ಅವರು ಸ್ಥಳೀಯ ಜನ ಪ್ರತಿನಿಧಿ. ಹಾಗಾಗಿ ಈಶ್ವರಪ್ಪ ಅವರು ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದು ಹೇಳಿರಬಹುದು ಎಂದು ಸಿ.ಟಿ ರವಿ ತಿಳಿಸಿದ್ರು.
ನಿನ್ನೆ ರಾತ್ರಿ ಸಕ್ರಿಯವಾಗಿದ್ದ ಕಾರ್ಯಕರ್ತ ಹರ್ಷನ ಕೊಲೆ ಮಾಡಿದ್ದಾರೆ. ಕೊಲೆಗೆ ಕಾರಣರಾದವರ ಬಂಧನ ಆಗಬೇಕು. ಇದು ಮೇಲ್ನೋಟಕ್ಕೆ ಪೂರ್ವಯೋಜಿತ ಕೊಲೆ ತರಾನೆ ಕಾಣ್ತಿದೆ. ತನಿಖೆಗೂ ಮುನ್ನ ನಾನು ಏನೂ ಹೇಳಲ್ಲ. ಕೊಲೆಗೆ ಕಾರಣ ಗೊತ್ತಾಗಲಿ ಎಂದು ತಮ್ಮ ಅಭಿಪ್ರಾಯವನ್ನು ಸಿ.ಟಿ.ರವಿ ವ್ಯಕ್ತಪಡಿಸಿದ್ರು.
ಇದೇ ವೇಳೆ ರಾಜ್ಯದಲ್ಲಿ ಹಿಜಾಬ್ ವಿವಾದ ಸಂಬಂಧ ಪ್ರತಿಕ್ರಿಯಿಸಿ, ಹಿಜಾಬ್ ಬೇಕೋ ಬೇಡವೋ ಅನ್ನೋದು ಈಗ ಪ್ರಶ್ನೆ ಅಲ್ಲ. ಸಮವಸ್ತ್ರ ಬೇಕೋ ಬೇಡವೋ ಅನ್ನೋದು ಪ್ರಶ್ನೆ. ಇದನ್ನು ನಾನು ಬುದ್ಧಿ ಜೀವಿಗಳಿಗೆ ಕೇಳಲು ಬಯಸುತ್ತೇನೆ ಎಂದು ಸಿ.ಟಿ ರವಿ ತಿಳಿಸಿದರು.