ಕೂಗು ನಿಮ್ಮದು ಧ್ವನಿ ನಮ್ಮದು

ಬಿಎಸ್ವೈ, ಅಜೀಂ ಪ್ರೇಮ್‍ಜಿಗೆ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಅಜೀಂ ಪ್ರೇಮ್‍ಜಿ ಅವರಿಗೆ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೆಸ್‍ಕ್ಲಬ್ ವರ್ಷದ ವ್ಯಕ್ತಿಯಾಗಿ ಅಜೀಂ ಪ್ರೇಮ್‍ಜಿ ಮತ್ತು ಪ್ರೆಸ್ ಕ್ಲಬ್ 2021 ವರ್ಷದ ವ್ಯಕ್ತಿಯಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದ್ರು.

ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿಯನ್ನು ಪದ್ಮಶ್ರೀ ಹರೇಕಳ ಹಾಜಬ್ಬ, ನಟ ಕಿಚ್ಚ ಸುದೀಪ್, ಡಾ. ದೇವಿ ಪ್ರಸಾದ್ ಶೆಟ್ಟಿ, ಸಚಿವ ಡಾ.ಕೆ.ಸುಧಾಕರ್‍ಗೆ ನೀಡಲಾಯಿತು. ಇದೇ ವೇಳೆ, ಎಸ್‍ಎಸ್‍ಎಲ್‍ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್‍ಆರ್ ರಂಗನಾಥ್, ಸಚಿವ ಅಶ್ವಥನಾರಾಯಣ್, ನಟ ರಮೇಶ್ ಅರವಿಂದ್ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಿದ್ರು.

error: Content is protected !!