ಕೂಗು ನಿಮ್ಮದು ಧ್ವನಿ ನಮ್ಮದು

ಪಂಜಾಬ್‌ ಚುನಾವಣೆ : ಮೊದಲ ಮತ ಎಣಿಕೆಯಲ್ಲಿ ಆಪ್‌ ಮುನ್ನಡೆ

ಲಕ್ನೋ: ಉತ್ತರ ಪ್ರದೇಶ ಚುನಾವಣೆಯ ಮತ ಎಣಿಕೆ ಆರಂಭಗೊಂಡಿದ್ದು ಆರಂಭದ ಅಂಚೆ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಇಪ್ಪತೈದು, ಎಸ್‌ಪಿ ಹದಿನೆಂಟು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಅಂಚೆ ಮತ ಎಣಿಕೆಯಲ್ಲಿ ಮುನ್ನಡೆ ಪಡೆದರು ಮಧ್ಯಾಹ್ನದ ವೇಳೆ ಫಲಿತಾಂಶ ಸ್ಪಷ್ಟವಾಗಲಿದೆ. 2024ರ ಲೋಕಸಭಾ ಚುನಾವಣೆ ಹಾಗೂ ರಾಷ್ಟ್ರಪತಿ ಚುನಾವಣೆಯಲ್ಲಿ ಬಹು ಮುಖ್ಯ ಪಾತ್ರವನ್ನು ವಹಿಸಲಿದೆ.

ಚುನಾವಣೋತ್ತರ ಸಮೀಕ್ಷೆಗಳು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ನೇತೃತ್ವದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ. ಉತ್ತರ ಪ್ರದೇಶದಲ್ಲಿ ಒಟ್ಟು 403 ಕ್ಷೇತ್ರಗಳಿದ್ದು ಬಹುಮತಕ್ಕೆ 202 ಸ್ಥಾನಗಳು ಬೇಕು. 2017ರ ಚುನಾವಣೆಯಲ್ಲಿ ಬಿಜೆಪಿ 312, ಬಿಎಸ್‌ಪಿ 19, ಎಸ್‌ಪಿ+ಕಾಂಗ್ರೆಸ್ 54, ಇತರರು 18 ಕ್ಷೇತ್ರಗಳಲ್ಲಿ ಜಯಗಳಿಸಿದ್ರು.

error: Content is protected !!