ಬೆಳಗಾವಿ: ಅನಗೋಳ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಮೇಲ್ವಿಚಾರಕಿ ಶಾಂತಾ ಗುಡಿ ಅವರ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.
ಈ ಸಮಾರಂಭದಲ್ಲಿ ಮಹಿಳೆಯರು ರಂಗೋಲಿ ಸ್ಪರ್ಧೆ, ಲಿಂಬು ಚಮಚ, ಸಂಗೀತ ಕುರ್ಚಿ, ಜಾನಪದ ಗೀತೆ ಸೇರಿದಂತೆ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಿದ್ದರು. ಮಹಿಳೆಯರು ಸ್ಪರ್ಧೆಗಳಲ್ಲಿ ಭಾಗವಹಿಸಿ, ವಿಜೃಂಭಣೆಯಿಂದ ಮಹಿಳಾ ದಿನಾಚರಣೆ ಆಚರಿಸಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸುವರ್ಣ ಪಾಟೀಲ್ ಅವರು ಮಹಿಳಾ ಸಬಲೀಕರಣ ಬಗ್ಗೆ ಮಾತನಾಡಿದರು. ಸಮಾರಂಭದಲ್ಲಿ ನಗರ ಸೇವಕರಾದ ಶೋಭಾ ಸೋಮನಾಚೆ, ಕೂರ್ಶಿದ್ ಮುಲ್ಲಾ ಉಪಸ್ಥಿತರಿದ್ದರು.