ಚಿಕ್ಕಬಳ್ಲಕಾಪುರ: ಇಂದು ಚಿಕ್ಕಬಳ್ಳಾಪುರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಳ್ಳಿಯಲ್ಲಿ 400 ಬೆಡ್‌ಗಳ ಆಸ್ಪತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶಂಕುಸ್ಥಾಪನೆ ಮಾಡಲಿದ್ದಾರೆ.
ಇಂದು ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ವಿಶೇಷ ಹೆಲಿಕಾಪ್ಟರ್ ಮೂಲಕ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿರುವ ಶ್ರೀ ಸತ್ಯಸಾಯಿ ಆಶ್ರಮಕ್ಕೆ ಭೇಟಿ ನೀಡಲಿರುವ ಶಾ, ನಂತರ 400 ಬೆಡ್‌ಗಳ ಸತ್ಯಸಾಯಿ ಸರಳಾ ಮೇಮೊರಿಯಲ್ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದು, ಭೂಮಿ ಪೂಜೆಯನ್ನು ಮಾಡಲಿದ್ದಾರೆ.
ಸತ್ಯಸಾಯಿ ಸಮಾಗಮಾ ಕ್ರೀಡಾಂಗಣದಲ್ಲಿ 50 ನಿಮಿಷಗಳ ಕಾಲ ಆಶ್ರಮದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸತ್ಯಸಾಯಿ ಲೋಕಶಿಕ್ಷಣ ಸಂಸ್ಥೆಗಳು ಹಾಗೂ ಸತ್ಯಸಾಯಿ ಬಾಬಾ ಆಶ್ರಮದಿಂದ, ಆಶ್ರಮದ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಅಮಿತ್ ಶಾಗೆ ಝಡ್+ ಕ್ಯಾಟಗರಿ ಭದ್ರತೆ ಒದಗಿಸಲಾಗಿದೆ.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಗೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್, ಆರೋಗ್ಯ ಸಚಿವ ಡಾ ಕೆ ಸುಧಾಕರ್ ಸೇರಿದಂತೆ ಗಣ್ಯರು ಸಾಥ್ ನೀಡಲಿದ್ದಾರೆ.