ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಹೋಟೆಲ್ ದರ ಹೆಚ್ಚಳವಾಗುವ ಸಾಧ್ಯತೆಯಿದೆ. ಅಡುಗೆ ಎಣ್ಣೆ ಹಾಗೂ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಾಗಿ ಕಂಗೆಟ್ಟ ಹೋಟೆಲ್ ಮಾಲೀಕರು ದರ ಏರಿಕೆಗೆ ನಿರ್ಧಾರ ಕೈಗೊಂಡಿದ್ದಾರೆ.
ಹೋಟೆಲ್ ಮಾಲೀಕರು ಎರಡೂವರೆ ತಿಂಗಳ ಹಿಂದೆಯೇ ದರ ಏರಿಕೆ ಮಾಡಿದ್ದರು. ಈಗ ಕಮರ್ಷಿಯಲ್ ಗ್ಯಾಸ್ ಬೆಲೆ, ಅಡುಗೆ ಎಣ್ಣೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆ ಈಗ ಮತ್ತೊಮ್ಮೆ ದರ ಏರಿಕೆಗೆ ಚಿಂತನೆ ನಡೆಸಿದ್ದಾರೆ.
ಸೋಮವಾರ ನೂರಕ್ಕೂ ಹೆಚ್ಚು ಹೊಟೇಲ್ ಮಾಲೀಕರು ಸಭೆ ಸೇರಲಿದ್ದಾರೆ. ಈ ವೇಳೆಯಲ್ಲಿ ಬೆಂಗಳೂರು ಹಾಗೂ ರಾಜ್ಯಾದ್ಯಂತ ದರ ಏರಿಕೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ. ಸೋಮವಾರವೇ ಹೊಸ ದರ ಪಟ್ಟಿ ಬಿಡುಗಡೆಗೊಳಿಸುವ ಸಾಧ್ಯತೆಯಿದೆ. ಬೆಲೆ ಏರಿಕೆಗೆ ಕಾರಣಗಳೇನು?
- ಕಮರ್ಷಿಯಲ್ ಗ್ಯಾಸ್ ಬೆಲೆ ನಿರಂತರ ಏರಿಕೆ.
- ಇಂದು ಕಮರ್ಷಿಯಲ್ ಗ್ಯಾಸ್ ಬೆಲೆ ೨೬೦ ರೂಪಾಯಿ ಬೆಲೆ ಏರಿಕೆಯಾಗಿದೆ.
- ಅಡುಗೆ ಎಣ್ಣೆ ಬೆಲೆ ಏರಿಕೆಯಾಗಿರುವುದು.
- ಅಗತ್ಯ ವಸ್ತುಗಳ ಬೆಲೆ ಏರಿಕೆ.
- ವಿದ್ಯುತ್ ದರ ಏರಿಕೆ.
- ಮುಂದಿನ ದಿನಗಳಲ್ಲಿ ಸರ್ಕಾರ ಹಾಲಿನ ದರ ಏರಿ ಮಾಡುವ ಸಾಧ್ಯತೆ