ಹಾಸನಾಂಬೆ ದರ್ಶನಕ್ಕೆ ಭಕ್ತರ ಪ್ರವಾಹ : ಮಧ್ಯರಾತ್ರಿಯಿಂದಲೇ ಸರತಿ
ಹಾಸನ: ಮೊದಲ ದಿನವೇ ಹಾಸನಾಂಬೆ ದರ್ಶನಕ್ಕೆ ಭಕ್ತರ ಪ್ರವಾಹ ಹರಿದು ಬರುತ್ತಿದೆ. ಮಧ್ಯರಾತ್ರಿಯಿಂದಲೇ ಸರತಿ ಸಾಲಿನಲ್ಲಿ ನಿಂತು ಭಕ್ತರು ದರ್ಶನ ಪಡೆಯುತ್ತಿದ್ದಾರೆ. ಇಂದು ಬೆಳಗ್ಗೆ 6 ರಿಂದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿ ಕೊಡಲಾಗಿದ್ದು, ದಿನದ 24 ಗಂಟೆಯೂ ಹಾಸನಾಂಬೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಇಂದಿನಿಂದ 11 ದಿನಗಳ ಕಾಲ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇನ್ನು ನೇರ ದರ್ಶನಕ್ಕಾಗಿ 1000 ಹಾಗೂ 300 ರೂ ಗಳ ವಿಶೇಷ ದರ್ಶನಕ್ಕೆ ವ್ಯವಸ್ಥೆಯು ಇದೆ. ಭಾರೀ ಸಂಖ್ಯೆಯಲ್ಲಿ ಭಕ್ತರ ಆಗಮನ ಹಿನ್ನೆಲೆಯಲ್ಲಿ ದೇವಾಲಯದ ಬಳಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.