ಬೆಂಗಳೂರು: ವಿಧಾನ ಪರಿಷತ್‌ಗೆ ಜೆಡಿಎಸ್ ಅಭ್ಯರ್ಥಿಯನ್ನು ಘೋಷಿಸಿದ್ದು, ಶರವಣ ಅವರಿಗೆ ಟಿಕೆಟ್ ನೀಡಿರುವುದಾಗಿ ತಿಳಿಸಿದೆ. ಶರವಣ ಅವರ ಹೆಸರನ್ನು ಶಾಸಕಾಂಗ ಸಭೆಯಲ್ಲಿ ಘೋಷಿಸಲಾಗಿದೆ. ಜೆಡಿಎಸ್ ಅಭ್ಯರ್ಥಿಯಾಗಿ ಶರವಣ ನಾಮಪತ್ರ ಸಲ್ಲಿಸಲಿದ್ದಾರೆ. ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹಾಗೂ ಪಕ್ಷದ ಶಾಸಕರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಕುಮಾರಸ್ವಾಮಿ ಅವರ ಕಾಲಿಗೆ ಬಿದ್ದು ಶರವಣ ಆಶೀರ್ವಾದ ಪಡೆದರು. ನಂತರ ಕುಮಾರಸ್ವಾಮಿ ಹಾಗೂ ಸಿಎಂ ಇಬ್ರಾಹಿಂ ಇಬ್ಬರೂ ಶರವಣ ಅವರಿಗೆ ಬಿ ಫಾರಂ ನೀಡಿದರು. ರಾಷ್ಟ್ರೀಯ ಅಧ್ಯಕ್ಷರ ಸಮ್ಮುಖದಲ್ಲಿ, ಕುಮಾರಸ್ವಾಮಿ ಸೇರಿದಂತೆ ಎಲ್ಲರೂ ಸಮಾಲೋಚನೆ ಮಾಡಿ ಶರವಣ ಅವರನ್ನು ಆಯ್ಕೆ ಮಾಡಿದ್ದೇವೆ ಎಂದು ಸಿಎಂ ಇಬ್ರಾಹಿಂ ತಿಳಿಸಿದ್ದಾರೆ.