ಕೂಗು ನಿಮ್ಮದು ಧ್ವನಿ ನಮ್ಮದು

ಪ್ರಧಾನಿ ಮೋದಿ ವಿರುದ್ಧವೂ ಇಡಿ ತನಿಖೆ ಮಾಡಿತ್ತು, ಆಗ ಹೋರಾಟ ಮಾಡಿರಲಿಲ್ಲ: ನಳಿನ್ ಕುಮಾರ್ ಕಟೀಲ್

ಚಾಮರಾಜನಗರ: ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ವಿರುದ್ಧವೂ ಜಾರಿ ನಿರ್ದೇಶನಾಲಯ ಇಡಿ ತನಿಖೆ ಮಾಡಿತ್ತು. ಆಗ ಯಾರೂ ಹೋರಾಟ ಮಾಡಿರಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಇಡಿ ವಿರುದ್ಧ ಕಾಂಗ್ರೆಸ್ ಹೋರಾಟಕ್ಕೆ ಸಂಬಂಧಿಸಿದಂತೆ ಚಾಮರಾಜನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಸಂವಿಧಾನ ಹಾಗೂ ಕಾನೂನಿನ ಮೇಲೆ ನಂಬಿಕೆಯಿಲ್ಲ. ಕಾನೂನಿನ ಆಧಾರದ ಮೇಲೆ ಇ.ಡಿ ವಿಚಾರಣೆ ಮಾಡುತ್ತಿದೆ. ಹಿಂದೆ ನರೇಂದ್ರ ಮೋದಿ, ಅಮಿತ್ ಶಾ ಅವರ ವಿರುದ್ಧವೂ ಇ.ಡಿ ತನಿಖೆ ಮಾಡಿತ್ತು. ಆಗ ಯಾರೂ ಹೋರಾಟ ಮಾಡಿರಲಿಲ್ಲ ಎಂದು ತಿಳಿಸಿದ್ದಾರೆ. 

ವಿಚಾರಣೆಗೆ ಹಾಜರಾಗುವುದು ಅವರ ಧರ್ಮ. ಆದರೆ ಕಾಂಗ್ರೆಸ್ ಬೇರೆ-ಬೇರೆ ಕಾರಣಗಳಿಗೆ ಹೋರಾಟ ಮಾಡುತ್ತಿದೆ. ದೇಶದಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆ ಮಾಡಿದ್ದು ಕಾಂಗ್ರೆಸ್. ವಿಪಕ್ಷ ಆಗಲೂ ಕೂಡ ಕಾಂಗ್ರೆಸ್ ನಾಲಾಯಕ್ ಆಗಿದೆ. ಅದಕ್ಕಾಗಿ ದೇಶದಲ್ಲಿ ಜನತೆ ಕಾಂಗ್ರೆಸ್ ಅನ್ನು ತಿರಸ್ಕರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. 

error: Content is protected !!