ಶಿವಮೊಗ್ಗ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ.ತುಮಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಸಚಿವರ ಬೆಂಗಾವಲು ವಾಹನಕ್ಕೆ ಭದ್ರಾವತಿ ಜಂಕ್ಷನ್ ಬಳಿ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಬೆಂಗಾವಲು ವಾಹನದಲ್ಲಿದ್ದವರು ಮತ್ತು ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಅಪಘಾತದ ರಭಸಕ್ಕೆ ಎರಡೂ ವಾಹನಗಳ ಮುಂಭಾಗ ಜಖಂಗೊಂಡಿದೆ.