ಮುಂಬಯಿ: ಕಿಲ್ಲರ್ ಕೊರೋನಾ ಭೀತಿ, ಭಾರತ ಲಾಕ್ ಡೌನ್ ಹಿನ್ನೆಲೆ ಆರ್.ಬಿ.ಐ, ಬ್ಯಾಂಕ್ ಸಾಲಗಾರರಿಗೆ ಬಿಗ್ ರಿಲೀಫ್ ನೀಡಿದೆ. ವೈಯಕ್ತಿಕ ಸಾಲ, ಗೃಹ ಸಾಲ, ವಾಹನ ಸಾಲ, ಗೋಲ್ಡ್ ಲೋನ್, ಯಾವುದೇ ಹಣಕಾಸು ಸಂಸ್ಥೆಗಳಿಂದ ತೆಗೆದುಕೊಂಡ ಸಾಲ ಸೇರಿದಂತೆ ಎಲ್ಲಾ ರೀತಿಯ ಸಾಲಗಳ ಇಎಂಐ (ಮಾಸಿಕ ಕಂತು) ಅನ್ನು ಮೂರು ತಿಂಗಳು ಮುಂದುಡಿದೆ. ರಾಷ್ಟ್ರೀಕೃತ, ಗ್ರಾಮೀಣ, ಸಹಕಾರಿ ಬ್ಯಾಂಕ್ ಸೇರಿದಂತೆ ಎಲ್ಲಾ ಬ್ಯಾಂಕುಗಳಿಗೂ ಈ ಆದೇಶ ಅನ್ವಯವಾಗಲಿದೆ ಎಂದು ಆರ್.ಬಿ.ಐ ಗವರ್ನರ್ ಶಕ್ತಿಕಾಂತ್ ದಾಸ್ ಸುದ್ದಿಗೋಷ್ಟಿ ನಡೆಸಿ ಸ್ಪಷ್ಟಪಡಿಸಿದ್ದಾರೆ. ಇದರಿಂದ ಸಾಲಗಾರರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಸಾಲಗಾರರು ನಿಟ್ಟುಸಿರು ಬಿಡುವಂತಾಗಿದೆ.