ಕೂಗು ನಿಮ್ಮದು ಧ್ವನಿ ನಮ್ಮದು

5 ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ವಯಸ್ಕ ಸಂಬಂಧಿಯಿಂದಲೇ ಅತ್ಯಾಚಾರ

ಹುಬ್ಬಳ್ಳಿ: ಹುಬ್ಬಳ್ಳಿಯ ವೀರಾಪುರ ಓಣಿ ಗೊಲ್ಲರ ಓಣಿಯ ಸಿದ್ಧಾರೂಢ ಮಠದ ಬಳಿ ಸೋಮವಾರ ಮಧ್ಯಾಹ್ನ ಅಪ್ರಾಪ್ತನೊಬ್ಬ ಸಂಬಂಧಿಯ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಸುಮಾರು 15 ವರ್ಷದ ಬಾಲಕನು ಅಂದಾಜು 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಬಗ್ಗೆ ಬೆಂಡಿಗೇರಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂಬಂಧಿಯಾದ ಬಾಲಕನು ಮಠದ ಬಳಿ ಆಟವಾಡುತ್ತಿದ್ದ ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ಅದೇ ಓಣಿಯಲ್ಲಿರುವ ಅಂಗನವಾಡಿ ಕಟ್ಟಡದ ಮೇಲೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾಗಿ ಬಾಲಕಿಯ ತಾಯಿಯು ಬೆಂಡಿಗೇರಿ ಠಾಣೆಯಲ್ಲಿ ದೂರು ಕೊಟ್ಟಿದ್ದಾರೆ.

error: Content is protected !!