ಕ್ಯಾಂಟರ್ ಗೂಡ್ಸ್ ವಾಹನ ಮತ್ತು ದ್ವಿಚಕ್ರವಾಹನ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಿರವಾರ ತಾಲೂಕಿನ ಕ್ರಾಸ್ ಬಳಿ ಮಂಗಳವಾರ ನಡೆದಿದೆ.
ರಸ್ತೆ ಅಪಘಾತದಲ್ಲಿ ಸಾವಿಗೀಡಾದವರನ್ನು ಬಸವರಾಜ್ ಮಾಸಳಿ (45) ಭೀಮವ್ವ ಮಾಸಳಿ (50) ಹಾಗೂ ನರೇಶ್ ಎಂದು ಗುರುತಿಸಲಾಗಿದೆ ಮೃತರು ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ನಿವಾಸಿಗಳಾಗಿದ್ದಾರೆ.
ಮೃತ ಬಸವರಾಜ್, ಆತನ ಮಗ ನರೇಶ್ ಹಾಗೂ ಅತ್ತಿಗೆ ಭೀಮವ್ವ ಅವರು ಬೈಕಿನಲ್ಲಿ ತೆರಳುತ್ತಿದ್ದರು. ಬೈಕ್ ನಲ್ಲಿ ಬಸವರಾಜ್ ಮಗ ಹಾಗೂ ಅತ್ತಿಗೆ ಮೂವರು ಕಲ್ಲೂರಿನಿಂದ ಕುರ್ಡಿ ಗ್ರಾಮಕ್ಕೆ ಹೊರಟಿದ್ದ ಮೂವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕುರ್ಡಿ ಸಮೀಪಹಳ್ಳಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ಯಾಂಟರ್ ನ ಚಾಲಕ ಘಟನೆ ನಡೆದ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಸಿರವಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.