ನವದೆಹಲಿ:ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 9,531 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 4,43,48,960ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಆಗಸ್ಟ್ 22 ಬಿಡುಗಡೆಗೊಳಿಸಿರುವ ಅಂಕಿ-ಅಂಶದಲ್ಲಿ ತಿಳಿಸಿದೆ.
ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 97,648ಕ್ಕೆ ಇಳಿಕೆಯಾಗಿದೆ. 24ಗಂಟೆಯಲ್ಲಿ ಕೋವಿಡ್ ನಿಂದ 26 ಮಂದಿ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ5,27,368ಕ್ಕೆ ತಲುಪಿದೆ.
ದೇಶದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.59ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.4.15ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.3.59ರಷ್ಟಿದೆ ಎಂದು ಅಂಕಿಅಂಶ ವಿವರಿಸಿದೆ. 24ಗಂಟೆಯಲ್ಲಿ 2,29,546 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈವರೆಗೆ ದೇಶಾದ್ಯಂತ ಒಟ್ಟು 88.27 ಕೋಟಿ ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಭಾರತದಾದ್ಯಂತ ಕೋವಿಡ್ ನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,37,23,944ಕ್ಕೆ ಏರಿಕೆಯಾಗಿದೆ.