ಕೂಗು ನಿಮ್ಮದು ಧ್ವನಿ ನಮ್ಮದು

BJP ಸೇರ್ಪಡೆಗೂ ಮುನ್ನ ಜೆಪಿ ನಡ್ಡಾ ಅವರನ್ನು ಭೇಟಿಯಾದ ಕ್ಯಾಪ್ಟನ್ ಅಮರಿಂದರ್ ಸಿಂಗ್

ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಪಂಜಾಬ್ ಲೋಕ ಕಾಂಗ್ರೆಸ್ (ಪಿಎಲ್ಸಿ) ಎಂಬ ಹೊಸ ಪಕ್ಷ ಸ್ಥಾಪಿಸಿದ್ದ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಇವತ್ತು ಸಂಜೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅದಕ್ಕೂ ಮೊದಲು ಇಂದು ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರನ್ನು ಔಪಚಾರಿಕವಾಗಿ ಭೇಟಿಯಾಗಿದ್ದಾರೆ. ಅಮರಿಂದರ್ ಸಿಂಗ್ ತಮ್ಮ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಲಿದ್ದಾರೆ.

ಅಮರಿಂದರ್ ಸಿಂಗ್ ಅವರೊಂದಿಗೆ ಮಾಜಿ ಶಾಸಕರು ಸೇರಿದಂತೆ 6 ಮಾಜಿ ಕಾಂಗ್ರೆಸ್ ನಾಯಕರು ಬಿಜೆಪಿ ಸೇರುವ ನಿರೀಕ್ಷೆಯಿದೆ. ಇಂದು ಸಂಜೆ 4.30ಕ್ಕೆ ಅಮರಿಂದರ್ ಸಿಂಗ್ ತಮ್ಮ ಬೆಂಬಲಿಗ ನಾಯಕರೊಂದಿಗೆ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ. ಬಿಜೆಪಿಗೆ ಸೇರ್ಪಡೆಗೊಂಡ ನಂತರ ಅವರು ಪಕ್ಷದಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಇತ್ತೀಚೆಗೆ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅಮರಿಂದರ್ ಸಿಂಗ್ ಭೇಟಿ ಮಾಡಿದ್ದರು.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ಬದಲಿಗೆ ಚರಣ್ಜಿತ್ ಸಿಂಗ್ ಚನ್ನಿ ಅವರನ್ನು ಪಂಜಾಬ್ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಲಾಗಿತ್ತು. ಇದರಿಂದ ಅಮರೀಂದರ್ ಸಿಂಗ್ ಅಸಮಾಧಾನಗೊಂಡು, ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ ತೊರೆದ ನಂತರ ಅವರು ಪಂಜಾಬ್ ಲೋಕ ಕಾಂಗ್ರೆಸ್ (PLC) ಸ್ಥಾಪಿಸಿದ್ದರು. 80 ವರ್ಷದ ಅಮರೀಂದರ್ ಸಿಂಗ್ ಇಂದು ದೆಹಲಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ನಾಯಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರಲಿದ್ದಾರೆ. ಅಮರೀಂದರ್ ಸಿಂಗ್ 2 ಬಾರಿ ಪಂಜಾಬ್ನ ಮುಖ್ಯಮಂತ್ರಿಯಾಗಿದ್ದವರು. ಅವರು ಪಟಿಯಾಲ ರಾಜಮನೆತನಕ್ಕೆ ಸೇರಿದವರಾಗಿದ್ದಾರೆ

error: Content is protected !!