ಕೂಗು ನಿಮ್ಮದು ಧ್ವನಿ ನಮ್ಮದು

ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ, ಆರು ಮಂದಿ ಸಾವು!

ಹೆಲಿಕಾಪ್ಟರ್ ಪತನಗೊಂಡಿರುವ ಘಟನೆ ಉತ್ತರಾಖಂಡದ ಕೇದಾರನಾಥ ಬಳಿ ನಡೆದಿದೆ. ಈ ಭೀಕರ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ.

ಈ ಹೆಲಿಕಾಪ್ಟರ್ ಆರ್ಯನ್ ಕಂಪನಿಗೆ ಸೇರುದ್ದು ಎಂದು ಹೇಳಲಾಗುತ್ತಿದೆ. ಉತ್ತರಾಖಂಡದ ಫಟಾದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿಗಳ ವಿಶೇಷ ಪ್ರಧಾನ ಕಾರ್ಯದರ್ಶಿ ಅಭಿನವ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹೆಲಿಕಾಪ್ಟರ್ ಕೇದಾರನಾಥದಿಂದ ಯಾತ್ರಾರ್ಥಿಗಳನ್ನು ವಾಪಸ್ ಕರೆತರುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಲಭಿಸಿದ ಮಾಹಿತಿ ಪ್ರಕಾರ, ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿವೆ. 6 ಜನರಿದ್ದ ಹೆಲಿಕಾಪ್ಟರ್‌

ಮಾಹಿತಿ ಪ್ರಕಾರ, ಖಾಸಗಿ ಕಂಪನಿಯ ಹೆಲಿಕಾಪ್ಟರ್ ನಲ್ಲಿ 6 ಮಂದಿ ಇದ್ದರು. ಭಕ್ತರು ಕೇದಾರನಾಥ ದೇಗುಲಕ್ಕೆ ತೆರಳುತ್ತಿದ್ದ ವೇಳೆ ಮಾರ್ಗಮಧ್ಯೆ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಹೆಲಿಕಾಪ್ಟರ್‌ನಲ್ಲಿದ್ದ ಪೈಲಟ್ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ.

ಕೇದಾರನಾಥಕ್ಕೆ ತೆರಳುತ್ತಿದ್ದ ಯಾತ್ರಿಕರ ಹೆಲಿಕಾಪ್ಟರ್ ಅಪಘಾತ

ವಿಶೇಷವೆಂದರೆ, ಕೇದಾರನಾಥ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಹೆಚ್ಚಿನ ಜನರು ಕಾಲ್ನಡಿಗೆಯಲ್ಲಿ ಕೇದಾರನಾಥ ದೇವಾಲಯವನ್ನು ತಲುಪುತ್ತಾರೆ ಮತ್ತು ಕೆಲವರು ಇದಕ್ಕಾಗಿ ಹೆಲಿಕಾಪ್ಟರ್‌ನ ಸಹಾಯವನ್ನೂ ತೆಗೆದುಕೊಳ್ಳುತ್ತಾರೆ. ಇಂದು (ಮಂಗಳವಾರ) ಕೇದಾರನಾಥ ದೇವಸ್ಥಾನಕ್ಕೆ ತೆರಳುತ್ತಿದ್ದ ಭಕ್ತರ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಕೆಟ್ಟ ಹವಾಮಾನದಿಂದಾಗಿ ಈ ಅಪಘಾತ

ಖಾಸಗಿ ಆರ್ಯನ್ ಕಂಪನಿಯ ಹೆಲಿಕಾಪ್ಟರ್ ಕೇದಾರನಾಥ ಬಳಿ ಅಪಘಾತಕ್ಕೀಡಾಗಿದೆ ಎಂದು ಹೇಳಲಾಗುತ್ತಿದೆ. ಪ್ರತಿಕೂಲ ಹವಾಮಾನದಿಂದಾಗಿ ಹೆಲಿಕಾಪ್ಟರ್ ಪತನವಾಗಿರುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ.

ಹೆಲಿಕಾಪ್ಟರ್ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಪತನಗೊಂಡಿದೆ. ಹೆಲಿಕಾಪ್ಟರ್ ಪರ್ವತಕ್ಕೆ ತಾಕಿ ತಕ್ಷಣ ಬೆಂಕಿ ಹೊತ್ತಿಕೊಂಡಿದೆ. ಹೆಲಿಕಾಪ್ಟರ್ ಕೇದಾರನಾಥದಿಂದ ಡೆಹ್ರಾಡೂನ್‌ಗೆ ಹೋಗುತ್ತಿತ್ತು.

error: Content is protected !!