ಬೆಳಗಾವಿ: ಸ್ಯಾಂಡಲ್‌ವುಡ್ ನ ಪ್ರಖ್ಯಾತ ಹಾಸ್ಯನಟರಾಗಿದ್ದ ಬುಲೆಟ್ ಪ್ರಕಾಶ್ ಅವರ ಅಕಾಲಿಕ ನಿಧನ, ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಅತ್ಯುತ್ತಮ ನಟರಾಗಿದ್ದ ಇವರು ಮುನ್ನೂರಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳಲ್ಲಿ ನಟಿಸಿ ತಮ್ಮ ಅಭಿನಯದಿಂದ ಪ್ರೇಕ್ಷಕರನ್ನು ರಂಜಿಸಿದ್ದರು. ಕೇವಲ 44 ನೇ ವಯಸ್ಸಿನಲ್ಲಿ ಅಕಾಲಿಕವಾಗಿ ವಿಧಿವಶರಾಗಿರುವುದು ಬೇಸರದ ಸಂಗತಿ. ಅವರ ಸಾವಿನಿಂದ ಕನ್ನಡ ಚಿತ್ರರಂಗ ಒಬ್ಬ ಉತ್ತಮ ಹಾಸ್ಯನಟನನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಮತ್ತು ಅವರ ಕುಟುಂಬ ವರ್ಗದವರು, ಅಭಿಮಾನಿಗಳಿಗೆ ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
- ಶ್ರೀ ರಮೇಶ್ ಜಾರಕಿಹೊಳಿ
ಜಲಸಂಪನ್ಮೂಲ ಸಚಿವರು
ಕರ್ನಾಟಕ ಸರ್ಕಾರ