ಕೂಗು ನಿಮ್ಮದು ಧ್ವನಿ ನಮ್ಮದು

ಕೊರೋನಾ ಶಂಕಿತರ ಗಂಟಲು ದ್ರವ ಸಂಗ್ರಹಕ್ಕೆ ಸಂಚಾರಿ ಘಟಕ ಆರಂಭ: ಸಚಿವರಿಂದ ಚಾಲನೆ

ಬೆಳಗಾವಿ: ಕೋವಿಡ್ -19 ಗೆ ಸಂಬಂಧಿಸಿದಂತೆ ಶಂಕಿತರ ಗಂಟಲು ದ್ರವ ಸಂಗ್ರಹದ ಮೂರು ಸಂಚಾರಿ ಘಟಕಗಳ ಕಾರ್ಯಾರಂಭಕ್ಕೆ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರು ಇಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಚಾಲನೆ ನೀಡಿದರು.
ರೈಲ್ವೆ ಇಲಾಖೆ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ಉಪ ಸಭಾಪತಿ ಆನಂದ ಮಾಮನಿ, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಅನಿಲ್ ಬೆನಕೆ, ಮಹಾಂತೇಶ ದೊಡಗೌಡ್ರ, ಮಹಾದೇವಪ್ಪ ಯಾದವಾಡ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.

error: Content is protected !!