ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಹಂಸಗಡದಲ್ಲಿ ನಿರ್ಮಾಣ ಹಂತದಲ್ಲಿರುವ ಬೃಹದಾಕಾರದ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯ ಜೋಡಣೆ ಹಾಗೂ ಕಿಲ್ಲಾ ಒಳಾಂಗಣ ಮತ್ತು ಹೊರಾಂಗಣದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಪರಿಶೀಲಿಸಿದರು.
ಎಲ್ಲ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿದ್ದು, ಆದಷ್ಟು ಬೇಗ ಹಿರಿಯರೊಂದಿಗೆ, ಕಾರ್ಯಕರ್ತರೊಂದಿಗೆ ಚರ್ಚಿಸಿ ಉದ್ಘಾಟನೆಯ ದಿನಾಂಕ ನಿರ್ಧರಿಸಲಾಗುವುದು ಎಂದು ಹೆಬ್ಬಾಳಕರ್ ಈ ಸಂದರ್ಭದಲ್ಲಿ ತಿಳಿಸಿದರು.
ಈ ಸಮಯದಲ್ಲಿ ಗ್ರಾಮದ ಹಿರಿಯರು, ಯುವರಾಜ ಕದಂ, ಮನೋಹರ ಬೆಳಗಾಂವ್ಕರ್, ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಸಾತೇರಿ ಬೆಳವಟ್ಕರ್, ಛತ್ರೆ, ಬಾಹುರಾವ್ ಪವಾರ, ಪದ್ಮರಾಜ ಪಾಟೀಲ, ಬಾಗಣ್ಣ ನರೋಟಿ, ಸಚಿನ ಸಾಮಜಿ, ಮಹಾವೀರ ಪಾಟೀಲ, ಗಣಪತ್ ಮಾರಿಹಾಳ್ಕರ್, ಪ್ರಭಾಕರ್ ಮುಂತಾದವರು ಉಪಸ್ಥಿತರಿದ್ದರು.