ಬೆಳಗಾವಿ, ಜ.25(ಕರ್ನಾಟಕ ವಾರ್ತೆ): ಭಾರತ ಚುನಾವಣಾ ಆಯೋಗದ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಕೊಡಮಾಡುವ ಅತ್ಯುತ್ತಮ “ಜಿಲ್ಲಾ ಚುನಾವಣಾಧಿಕಾರಿ” ಪ್ರಶಸ್ತಿಯನ್ನು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರಿಗೆ ಪ್ರದಾನ ಮಾಡಲಾಯಿತು.
ಚುನಾವಣಾ ಆಯೋಗದ ವತಿಯಿಂದ ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ನಲ್ಲಿ ಬುಧವಾರ(ಜ.25) ಏರ್ಪಡಿಸಲಾಗಿದ್ದ “13ನೇ ರಾಷ್ಟ್ರೀಯ ಮತದಾರರ ದಿನಾಚರಣೆ” ಸಮಾರಂಭದಲ್ಲಿ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜಕುಮಾರ್ ಮೀನಾ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಭಾರತ ಚುನಾವಣಾ ಆಯೋಗ ಮತ್ತು ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ಇವರ ಕಚೇರಿಯ ವತಿಯಿಂದ ಪ್ರಶಸ್ತಿಯನ್ನು ನೀಡಲಾಯಿತು.
ಇದೇ ಸಂದರ್ಭದಲ್ಲಿ ಕಾಗವಾಡ ತಹಶೀಲ್ದಾರರಾಗಿರುವ ರಾಜೇಶ್ ಬುರ್ಲಿ ಅವರಿಗೆ ಸಹಾಯಕ ಮತದಾರರ ನೋಂದಣಾಧಿಕಾರಿ ವಿಭಾಗದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು.
ಮತದಾರರ ನೋಂದಣಿ, ಪರಿಷ್ಕರಣೆ ಸೇರಿದಂತೆ ಒಟ್ಟಾರೆ ಚುನಾವಣಾ ಕಾರ್ಯವನ್ನು ಅತ್ಯುತ್ತಮವಾಗಿ ಕಾರ್ಯನಿರ್ವಹಣೆಯನ್ನು ಪರಿಗಣಿಸಿ ವಿವಿಧ ವಿಭಾಗಗಳಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿರುತ್ತದೆ.