ಕೂಗು ನಿಮ್ಮದು ಧ್ವನಿ ನಮ್ಮದು

ಕೊರೋನಾ ಆತಂಕದ ನಡುವೆ ದ್ವೀತಿಯ ಪಿಯು ಪರೀಕ್ಷೆ ಆರಂಭ

ಬೆಳಗಾವಿ: ಕರೊನಾ ವೈರಸ್ ಆತಂಕದ ಮಧ್ಯೆ ಮೊದಲು ಬಾರಿಗೆ ದ್ವೀತಿಯ ಪಿಯುಸಿ ಪರೀಕ್ಷೆ ಆರಂಭವಾಗಿದೆ. ಪಿಯುಸಿ ದ್ವಿತೀಯ ವರ್ಷದ ಇಂಗ್ಲಿಷ್ ಪರೀಕ್ಷೆ ನಡೆಯುತ್ತಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟು 34 ಪರೀಕ್ಷಾ ಕೇಂದ್ರಗಳನ್ನು ಮಾಡಲಾಗಿದ್ದು, ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 21,612 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಅದರಂತೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 45 ಕೇಂದ್ರಗಳಲ್ಲಿ 26,559 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸೋಂಕು ನಿವಾರಕ ಔಷಧಿ ಸಿಂಪಡಿಸಲಾಗಿದೆ.

ಇನ್ನು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುವಾಗ ಮಾಸ್ಕ್ ಧರಿಸಿ ಸಾಕಷ್ಟು ಮುನ್ನೆಚ್ಚರಿಕೆಯಿಂದ ಬಂದಿದ್ರು. ಇನ್ನು ಪರೀಕ್ಷಾ ಕೇಂದ್ರಗಳಿಗೆ ಬರುವ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನ್ ಮಾಡಿದ ನಂತರ ಅವರಿಗೆ ಸ್ಯಾನಿಟೈಸರ್ ನೀಡಿ ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಯಿತು. ಉಳಿದಂತೆ ಪರೀಕ್ಷಾ ಕೇಂದ್ರದಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗಿದ್ದು, ಪರೀಕ್ಷಾರ್ಥಿಗಳಿಗೆ ಕೊರೋನಾ ವೈರಸ್ ವಿಚಾರವಾಗಿ ಜಾಗೃತಿ ಮೂಡಿಸಲಾಗಿದೆ.

error: Content is protected !!