ಕೂಗು ನಿಮ್ಮದು ಧ್ವನಿ ನಮ್ಮದು

ವಿಷ್ಣುವರ್ಧನ್ಗೆ ‘ಕರ್ನಾಟಕ ರತ್ನ’ ನೀಡಬೇಕು ಎಂಬ ಬೇಡಿಕೆ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ಮೈಸೂರಿನಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಸಿಎಂ ಬೊಮ್ಮಾಯಿ ಉದ್ಘಾಟನೆ ಮಾಡಿದ್ದಾರೆ. ಇದು ವಿಷ್ಣು ಅಭಿಮಾನಿಗಳ ಪಾಲಿಗೆ ವಿಶೇಷ ದಿನ. ‘ಸಾಹಸ ಸಿಂಹ’ ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಸಿಗಬೇಕು ಎಂಬುದು ಫ್ಯಾನ್ಸ್ ಬಯಕೆ.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸ್ಮಾರಕ ಅನಾವರಣ ಮಾಡಿದ ಬಳಿಕ ಮಾತನಾಡಿದ ಅವರು, ‘ವಿಷ್ಣು ಅಭಿಮಾನಿಗಳ ಮನದಾಳದ ಮಾತು ಮತ್ತು ಭಾವನೆಗಳಿಗೆ ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತದೆ’ ಎಂದು ಹೇಳಿದ್ದಾರೆ.

error: Content is protected !!