ಕೂಗು ನಿಮ್ಮದು ಧ್ವನಿ ನಮ್ಮದು

ನಶಿಸುತ್ತಿರುವ ವಿಶಿಷ್ಟ ಕಲೆಗಳ ರಕ್ಷಣೆಗೆ ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ನಶಿಸಿ ಹೋಗುತ್ತಿರುವ ತಳಸಮುದಾಯಗಳ ವಿಶಿಷ್ಟ ಕಲೆಗಳನ್ನು ಮುನ್ನೆಲೆಗೆ ತರುವ ನಿಟ್ಟಿನಲ್ಲಿ ಯುವಕಲಾವಿದರಿಗೆ ತರಬೇತಿ ನೀಡುವ ಯೋಜನೆಯನ್ನು ಸರಕಾರ ಹಮ್ಮಿಕೊಂಡಿದೆ. ನಶಿಸಿ ಹೋಗುತ್ತಿರುವ ವಿಶಿಷ್ಟ ಕಲಾಪ್ರಕಾರಗಳನ್ನು ಉಳಿಸಿ, ಬೆಳೆಸಲು ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.

ಬೆಳಗಾವಿ ಜಿಲ್ಲೆಯಲ್ಲಿ ನಶಿಸಿ ಹೋಗುತ್ತಿರುವ ತಳ ಸಮುದಾಯಗಳ ವಿಶಿಷ್ಟ ಕಲೆಗಳನ್ನು ಮುನ್ನೆಲೆಗೆ ತರಲು ತರಬೇತಿಯನ್ನು ನೀಡಲು ಸೋಮವಾರ (ಫೆ.6) ವಡಗಾವಿಯ ಕನ್ನಡ ಭವನದಲ್ಲಿ ನಡೆದ ಗುರುಗಳ ಆಯ್ಕೆ ಪ್ರಕ್ರಿಯೆ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲೂ ವಿಭಿನ್ನ ಮತ್ತು ವಿಶಿಷ್ಟ ಕಲಾಪ್ರಕಾರಗಳಿವೆ. ಹೊಸ ತಲೆಮಾರಿನ ಜನಸಮುದಾಯವು ಅವುಗಳ ರಕ್ಷಣೆಗೆ ಮುಂದಾಗಬೇಕು.
ಬೆಳಗಾವಿ ಜಿಲ್ಲೆಯಲ್ಲಿ ಇರುವ ಚೌಡಕಿ, ವೀರಗಾಸೆ ಕುಣಿತ, ಲಂಬಾಣಿ ನೃತ್ಯ, ಜಗ್ಗಲಗಿ ವಾದನ, ದೊಡ್ಡಾಟ ಮತ್ತಿತರ ವಿಶಿಷ್ಟ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸಬೇಕಿದೆ.

ವಿಶೇಷವಾಗಿ ತಳ ಸಮಯದಾಯಗಳಲ್ಲಿರುವ ವಿಶಿಷ್ಟ ಕಲೆಗಳನ್ನು ರಕ್ಷಿಸಲು ಸರಕಾರವು ಕಾರ್ಯಕ್ರಮ ಹಮ್ಮಿಕೊಂಡಿರುತ್ತದೆ. ಇಂತಹ ಕಲೆಗಳನ್ನು ಕರಗತ ಮಾಡಿಕೊಂಡಿರುವವರ ಮೂಲಕ ಯುವಸಮುದಾಯ ಹಾಗೂ ಕಲಾವಿದರಿಗೆ ತರಬೇತಿಯನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಜಿಲ್ಲೆಯಲ್ಲಿ ನಶಿಸಿ ಹೋಗುತ್ತಿರುವ ತಳ ಸಮುದಾಯಗಳ ವಿಶಿಷ್ಟ ಕಲೆಗಳ ಬಗ್ಗೆ ತರಬೇತಿ ನೀಡಲು ಗುರುಗಳ ಆಯ್ಕೆ ಪ್ರಕ್ರಿಯೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಡೆಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಹಾಗೂ ವಿವಿಧ ಕಲಾಪ್ರಕಾರಗಳ ಗುರುಗಳು ಉಪಸ್ಥಿತರಿದ್ದರು.

ಚೌಡಕಿ, ವೀರಗಾಸೆ ಕುಣಿತ, ಲಂಬಾಣಿ ನೃತ್ಯ, ಜಗ್ಗಲಗಿ ವಾದನ, ದೊಡ್ಡಾಟ ಮತ್ತಿತರ ವಿಶಿಷ್ಟ ಕಲಾಪ್ರಕಾರಗಳ ತರಬೇತುದಾರರ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕರಾದ ವಿದ್ಯಾವತಿ ಭಜಂತ್ರಿ, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಸಮುದಾಯ ಮುಖಂಡರು ಕಾರ್ಯಕ್ರಮದಲ್ಲಿ ಉಸ್ಥಿತರಿದ್ದರು.

error: Content is protected !!