ಮುಂಬೈ (ಮಹಾರಾಷ್ಟ್ರ) : ಡಿವೈನ್ ಸ್ಟಾರ್ ಎಂದೇ ಖ್ಯಾತರಾಗಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಅಭಿಮಾನಿಗಳಿಗೆ ಇಲ್ಲೊಂದು ಸಂತಸದ ಸುದ್ದಿಯಿದೆ. ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ. ಈ ಮೇರು ಗೌರವಕ್ಕೆ ನಟ ರಿಷಬ್ ಶೆಟ್ಟಿ ಭಾಜರಾಗಿದ್ದಾರೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ಕಾಂತಾರ ಸಿನಿಮಾ ಅವರ ಸಿನಿಜೀವನಕ್ಕೆ ದೊಡ್ಡ ಟರ್ನಿಂಗ್ ಪಾಯಿಂಟ್ ನೀಡಿತು. ಆ ಸಿನಿಮಾ ಬಳಿಕ ರಿಷಬ್ ಖ್ಯಾತಿ ಜಗದಗಲಕ್ಕೂ ಹರಡಿದೆ.
ಸಿನಿಮಾ ಸೂಪರ್ ಸಕ್ಸಸ್ ಕಂಡಿದ್ದು, ಕೋಟಿ ಕೋಟಿ ಕಲೆಕ್ಷನ್ ಮಾಡಿ ಎಲ್ಲ ಚಿತ್ರಗಳ ರೆಕಾರ್ಡ್ ಉಡೀಸ್ ಮಾಡಿತ್ತು. ಬಾಕ್ಸ್ ಆಫೀಸ್ನಲ್ಲಿ ಈ ಮೂಲಕ ಹೊಸ ದಾಖಲೆಯನ್ನೇ ಬರೆದಿದೆ. ಇದೀಗ ರಿಷಬ್ ಶೆಟ್ಟಿ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದು, ಕನ್ನಡ ಚಲನಚಿತ್ರರಂಗಕ್ಕೆ ಅತ್ಯಂತ ಖುಷಿಯ ವಿಚಾರವಾಗಿದೆ. ಜೀವಮಾನ ಸಾಧನೆಗಾಗಿ ಭಾರತೀಯ ಸಿನಿಮಾ ರಂಗದ ಪಿತಾಮಹ ದಾದಾಸಾಹೇಬ್ ಫಾಲ್ಕೆ ಅವರ ಹೆಸರಿನಲ್ಲಿ ಭಾರತ ಸರ್ಕಾರ ಈ ಗೌರವ ನೀಡುತ್ತದೆ.
ಭಾರತೀಯ ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ನೀಡುವ ಅತ್ಯುನ್ನತ ಗೌರವ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ. ಭಾರತೀಯ ಚಿತ್ರರಂಗದ ಪಿತಾಮಹರೆಂದೇ ಹೆಸರಾದ ದಾದಾಸಾಹೇಬ್ ಫಾಲ್ಕೆ ಅವರ ಸ್ಮರಣಾರ್ಥ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇದೀಗ ಈ ಅತ್ಯುನ್ನತ ಗೌರವಕ್ಕೆ ರಿಷಬ್ ಶೆಟ್ಟಿ ಪಾತ್ರರಾಗಿದ್ದು, ನಿಜಕ್ಕೂ ಸಂತಸದ ವಿಚಾರ. ʻಅತ್ಯಂತ ಭರವಸೆಯ ನಟʼ ವಿಭಾಗದಲ್ಲಿ ರಿಷಬ್ ಶೆಟ್ಟಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಸಂದಿದೆ. ಫೆ.20ರಂದು ಮುಂಬೈನ ತಾಜ್ ಲ್ಯಾಂಡ್ಸ್ ಹೋಟೆಲ್ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.