ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಶಿಕ್ಷೆ
ಬೆಂಗಳೂರು: ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದ್ದು, ಚೆಕ್ ಬೌನ್ಸ್ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಿಂದ ಶಿಕ್ಷೆ ವಿಧಿಸಲಾಗಿದೆ.
ಒಟ್ಟು 8 ಕೇಸ್ಗಳಲ್ಲಿ 1.38 ಕೋಟಿ ಹಣ ಪಾವತಿಸಬೇಕು. ಇಲ್ಲವಾದರೆ ತಲಾ 6 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಎಂದು 42ನೇ ಎಸಿಎಂಎಂ ಕೋರ್ಟ್ ಜಡ್ಜ್ ಜೆ. ಪ್ರೀತ್ ಆದೇಶ ಹೊರಡಿಸಿದ್ದಾರೆ.