ಕೂಗು ನಿಮ್ಮದು ಧ್ವನಿ ನಮ್ಮದು

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್; ತಲಾ ಎರಡು ಸಾವಿರ ರೂಪಾಯಿ ಆರ್ಥಿಕ ನೆರವು

ಕೆಲಸ ಸಿಗದ ಪದವೀಧರರಿಗೆ ಸಬ್ಸಿಡಿ ಘೋಷಿಸಲಾಗಿದೆ. ‘ಯುವಸ್ನೇಹಿ’ ಎಂಬ ಹೊಸ ಯೋಜನೆಯಡಿ ತಲಾ 2,000 ರೂಪಾಯಿ ನೀಡಲಾಗುವುದು.

2023-24ನೇ ಬಜೆಟ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ನಿರುದ್ಯೋಗಿಗಳಿಗೆ ಬಂಪರ್ ಕೊಡುಗೆ ಘೋಷಿಸಿದೆ. ಪದವಿ ಶಿಕ್ಷಣವನ್ನು ಮುಗಿಸಿ, ಮೂರು ವರ್ಷಗಳ ನಂತರವೂ ಯಾವುದೇ ಉದ್ಯೋಗ ದೊರೆಯದೆ ಇದ್ರೆ 2,000 ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದೆ. ‘ಯುವಸ್ನೇಹಿ’ ಎಂಬ ಹೊಸ ಯೋಜನೆಯಡಿ ತಲಾ 2,000 ರೂಪಾಯಿ ನೀಡಲಾಗುವುದು. ಒಂದು ಬಾರಿ ಮಾತ್ರ ಆರ್ಥಿಕ ನೆರವು ಸಿಗಲಿದೆ. ಇನ್ನು ಯುವಜನತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ಧನ ನೀಡಲಾಗುವುದು ಎಂದು ಘೋಷಿಸಲಾಗಿದೆ.

ಇನ್ನು ಒಟ್ಟಾರೆ ಈ ಉದ್ಯೋಗಗಳಲ್ಲಿ ಇರುವವರ ಸಹಾಯಧನ ಏರಿಕೆ ಮಾಡಲಾಗಿದೆ. ಆಶಾ ಕಾರ್ಯಕರ್ತರೆಯರು, ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕರು, ಬಿಸಿಯೂಟ ತಯಾರಕರು, ಅತಿಥಿ ಉಪನ್ಯಾಸಕರು, ಅತಿಥಿ ಶಿಕ್ಷಕರು, ಗ್ರಾಮಸಹಾಯಕರು, ಗ್ರಾಮ ಪಂಚಾಯ್ತಿ ಗ್ರಂಥಾಲಯ ಮೇಲ್ವಿಚಾರಕರು, ಗ್ರಾಮ ಪಂಚಾಯ್ತ್ರಿ ಸದಸ್ಯರ ಗೌರವ ಧನ ಹೆಚ್ಚಳ ಆಗಿದೆ.

error: Content is protected !!