ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರು ಗ್ರಾ.ಪಂ. ವ್ಯಾಪ್ತಿಯ ಗ್ರಾಮಗಳಲ್ಲಿ ‘ರಾಜಕಾರಣಿಗಳಿಗೆ ನಮ್ಮ ಊರಿಗೆ ಪ್ರವೇಶವಿಲ್ಲ’ ಎಂಬ ಫಲಕಗಳನ್ನು ಹಾಕಲಾಗಿದೆ.
ಹಳ್ಳಕ್ಕೆ ತೂಗು ಸೇತುವೆ ನಿರ್ಮಿಸಿಕೊಡುವಂತೆ ಮಾಡಿದ ಮನವಿಗೆ ಸ್ಪಂದಿಸದ್ದಕ್ಕೆ ಮತದಾರರು ಆಕ್ರೋಶ ವ್ಯಕ್ತಪಡಿಸಿದ್ದು, ತೂಗು ಸೇತುವೆ ನಿರ್ಮಿಸಿಕೊಡುವವರೆಗೆ ಮತ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ.