ನಾನೀಗ ಯಾವ ಪಕ್ಷದ ಸದಸ್ಯನೂ ಅಲ್ಲ ಎಂದು ಶಿವಮೊಗ್ಗದಲ್ಲಿ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದ್ದಾರೆ. ನನ್ನನ್ನು ಪರಿಷತ್ ಸದಸ್ಯ ಮಾಡಿದ್ದು ಆರ್ಎಸ್ಎಸ್ ಮುಖಂಡ ಮುಕುಂದ್. ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ.
ಆ ನಂತರ ನನ್ನನ್ನು ಪರಿಷತ್ ಸದಸ್ಯ ಸ್ಥಾನಕ್ಕೆ ನಾಮನಿರ್ದೇಶನ ಮಾಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಬರುತ್ತಿರುವುದು ಸಂತೋಷ. ಅವರು ಕೇವಲ ವಿಮಾನ ನಿಲ್ದಾಣ ಉದ್ಘಾಟಿಸಿ ಹೋಗುವುದಲ್ಲ. ವಿಐಎಸ್ಎಲ್ ಕಾರ್ಮಿಕರ ಸಮಸ್ಯೆಯನ್ನೂ ಆಲಿಸಬೇಕು ಎಂದು ಅವರು ಹೇಳಿದ್ದಾರೆ.