ಬೆಳಗಾವಿ: ಇಂದು ಬೆಳಗಾವಿ ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗಾವಿಯಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬೆಳಗಾವಿಯಲ್ಲಿ 3 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜಿಸಿದ್ದೇವೆ. ರೋಡ್ ಶೋ ಸ್ಥಳ, ಸಮಾವೇಶ ನಡೆಯುವ ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಹೆಲಿಪ್ಯಾಡ್, ವೇದಿಕೆ, ಎಂಟ್ರಿ ಗೇಟ್ ಬಳಿ ಓರ್ವ ಎಸ್‌ಪಿ ನೇತೃತ್ವದಲ್ಲಿ ಪಾರ್ಕಿಂಗ್, ಊಟದ ಸ್ಥಳದಲ್ಲಿ ಓರ್ವ ಎಸ್‌ಪಿ ನೇತೃತ್ವದಲ್ಲಿ ಭದ್ರತೆ ಕೈಗೊಂಡಿದ್ದೇವೆ. ಮೋದಿ ರೋಡ್ ಶೋ ನಡೆಸುವ ಮಾರ್ಗದಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ. ಹೀಗಾಗಿ ಬದಲಿ ರಸ್ತೆಗಳಲ್ಲಿ ಸಂಚರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡುತ್ತೇನೆ ಎಂದು ಟಿವಿ9ಗೆ ಬೆಳಗಾವಿ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಮಾಹಿತಿ ನೀಡಿದರು.