775 ಎಕರೆ ಭೂಮಿಯಲ್ಲಿ 384 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಇಂದು ಶಿವಮೊಗ್ಗ ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು ನೂತನ ಏರ್ಪೋರ್ಟ್ ಉದ್ಘಾಟಿಸಲಿದ್ದಾರೆ.
ಶಿವಮೊಗ್ಗ ತಾಲೂಕಿನ ಸೋಗಾನೆ ಗ್ರಾಮದ ಬಳಿ ನೂತನ ಏರ್ಪೋರ್ಟ್ ನಿರ್ಮಾಣಗೊಂಡಿದೆ. 775 ಎಕರೆ ಭೂಮಿಯಲ್ಲಿ 384 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣಗೊಂಡಿದೆ. 2008ರಲ್ಲಿ ಹೊಸ ಏರ್ಪೋರ್ಟ್ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. 2023ರಲ್ಲಿ ಕಾಮಗಾರಿ ಪೂರ್ಣಗೊಂಡಿದೆ