ಕೂಗು ನಿಮ್ಮದು ಧ್ವನಿ ನಮ್ಮದು

ಇಡೀ ವಿಶ್ವವೇ ಮೆಚ್ಚಿರುವ ಆದರ್ಶ ನಾಯಕ ಪ್ರಧಾನಿ ಮೋದಿ, ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗದಲ್ಲಿ ನೂತನ ಏರ್ಪೋರ್ಟ್ ಉದ್ಘಾಟನಾ ಸಮಾರಂಭ ಸಮಾವೇಶದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭಾಷಣ ಮಾಡಿದ್ದು ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳಿದ್ದಾರೆ. ಇಡೀ ವಿಶ್ವವೇ ಮೆಚ್ಚಿರುವ ಆದರ್ಶ ನಾಯಕ ಪ್ರಧಾನಿ ಮೋದಿ. ಇವರು ಶಿವಮೊಗ್ಗ ಏರ್ಪೋರ್ಟ್ ಉದ್ಘಾಟಿಸಿರುವುದು ಸಂತಸ ತಂದಿದೆ. ಕೊಟ್ಟ ಮಾತಿನಂತೆ ಏರ್ಪೋರ್ಟ್ ನಿರ್ಮಾಣ ಮಾಡಿ ಉದ್ಘಾಟನೆ ಮಾಡಿದ್ದಾರೆ.

ಈ ದಿನ ಬಹಳ ವೈಶಿಷ್ಟ್ಯಪೂರ್ಣವಾದದ್ದು ಮಲೆನಾಡು ಭಾಗದ ಜನರ ಕನಸು ನನಸಾಗುತ್ತಿರುವ ಶುಭ ಸಂಕೇತ. ಮೋದಿ ಆಶೀರ್ವಾದದಿಂದ ನಾಡಿನ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದೆ. ಇಂತಹ ಅವಕಾಶ ನನಗೆ ಸಿಕ್ಕಿದ್ದಕ್ಕೆ ಜನರಿಗೆ ನಾನು ಋಣಿಯಾಗಿದ್ದೇನೆ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಮಾತಿನಂತೆ ಕೆಲಸ ಮಾಡಿದ್ದೇನೆ. ಸಾಮಾಜಿಕ ನ್ಯಾಯವನ್ನು ಎಲ್ಲರಿಗೂ ಒದಗಿಸಿಕೊಟ್ಟಿದ್ದೇನೆ. ಮೋದಿ ನೇತೃತ್ವದಲ್ಲಿ ಡಬಲ್ ಇಂಜಿನ್ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿಯಾಗಿದೆ ಎಂದರು

error: Content is protected !!